ಕರ್ನಾಟಕ

karnataka

ETV Bharat / state

ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನ ಮೂಲದ ಮಹಿಳೆ ಅರೆಸ್ಟ್​

ಭಟ್ಕಳದಲ್ಲಿ ಸುಳ್ಳು ದಾಖಲೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿ ರೇಶನ್ ಕಾರ್ಡ್, ಜನನ ಪ್ರಮಾಣಪತ್ರ, ಆಧಾರ್​ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಪಡೆದಕೊಂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ​. ಇದೀಗ ದಾಳಿ ವೇಳೆ ಪೊಲೀಸರು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

Pak-based women who recidented in Bhatkal arrested by police
ಅಕ್ರಮವಾಗಿ ವಾಸವಾಗಿದ್ದ ಪಾಕ್​ ಮೂಲದ ಮಹಿಳೆ ಬಂಧನ

By

Published : Jun 10, 2021, 3:19 PM IST

Updated : Jun 10, 2021, 3:30 PM IST

ಕಾರವಾರ (ಉತ್ತರ ಕನ್ನಡ): ಭಟ್ಕಳದ ನವಾಯತ್​ ಕಾಲೋನಿಯೊಂದರ ಮನೆಯಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ c/o ಜಾವೀದ್ ಮೋಹಿದ್ದಿನ್ ರುಕ್ಸುದ್ದೀನ್ ಎಂದು ಗುರುತಿಸಲಾಗಿದೆ.

ಪಾಕಿಸ್ತಾನದ ನಾಗರೀಕತ್ವ ಹೊಂದಿರುವ ಮಹಿಳೆ ಕಳ್ಳ ಮಾರ್ಗದ ಮೂಲಕ ಭಟ್ಕಳಕ್ಕೆ 8 ವರ್ಷಗಳ ಹಿಂದೆಯೇ ಆಗಮಿಸಿ ಅಕ್ರಮವಾಗಿ ವಾಸವಾಗಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು.‌ ನವಾಯತ್​ ಕಾಲೋನಿಯಲ್ಲಿ ಜಾವೀದ್ ಮೊಹಿದ್ದೀನ್ ರುಕ್ಕುದ್ದೀನ್ ಎಂಬಾತನನ್ನು ದುಬೈನಲ್ಲಿ ವಿವಾಹವಾಗಿ 2014ರಲ್ಲಿ 3 ತಿಂಗಳು ವಿಸಿಟಿಂಗ್ ವೀಸಾದ ಮೇಲೆ ಭಾರತಕ್ಕೆ ಬಂದು ಹಿಂತಿರುಗಿದ್ದಳು. ಪುನಃ 2016ರ ಪ್ರಾರಂಭದಲ್ಲಿ ಕಳ್ಳ ಮಾರ್ಗವಾಗಿ ಭಾರತಕ್ಕೆ ನುಸುಳಿ ಬಂದು ತನ್ನ ಗಂಡನ ಮನೆಯಾದ ಭಟ್ಕಳದ ನವಾಯುತ ಕಾಲೋನಿಯಲ್ಲಿ 3 ಮಕ್ಕಳೊಂದಿಗೆ ವಾಸವಾಗಿದ್ದಳು.

ಪಾಕಿಸ್ತಾನ ಮೂಲದ ಮಹಿಳೆ ಬಂಧನ ಕುರಿತು ಎಸ್​ಪಿ ಮಾಹಿತಿ

ಭಟ್ಕಳದಲ್ಲಿ ಸುಳ್ಳು ದಾಖಲೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿ ರೇಶನ್ ಕಾರ್ಡ್, ಜನನ ಪ್ರಮಾಣಪತ್ರ, ಆಧಾರ್​ ಕಾರ್ಡ್, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಪಡೆದಕೊಂಡಿದ್ದಳು. ದಾಳಿ ವೇಳೆ ಪೊಲೀಸರು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಈಕೆಯ ವಿರುದ್ಧ ವಿದೇಶಿ ಕಾಯ್ದೆ ಉಲ್ಲಂಘನೆ ಮತ್ತು ಇತರೆ ಐಪಿಸಿ ಪ್ರಕರಣಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಿಳೆಯನ್ನು ಸ್ಥಳೀಯ ಕೋರ್ಟ್​​ ಮುಂದೆ ಹಾಜರುಪಡಿಸಿದ್ದು, ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬದರಿನಾಥ ಮಾರ್ಗದರ್ಶನದಲ್ಲಿ ಡಿವೈಎಸ್​ಪಿ ಬೆಳ್ಳಿಯಪ್ಪ, ಕೆ.ಯು. ಸಿಪಿಐ ದಿವಾಕರ ಪಿ.ಎಮ್, ಭಟ್ಕಳ ನಗರ ಪೊಲೀಸ್ ಠಾಣೆಯ ಪಿಎಸ್​ಐ ಕುಸುಮಾ ಬಿ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಓದಿ:ಲಾಕ್​ಡೌನ್ ವಿಸ್ತರಣೆ ಮಾಡಿದ್ರೆ ಆರ್ಥಿಕ ಚಟುವಟಿಕೆಗೆ ಏನಪ್ಪಾ ಮಾಡೋದು?: ಬಿಎಸ್​ವೈ

Last Updated : Jun 10, 2021, 3:30 PM IST

ABOUT THE AUTHOR

...view details