ಕಾರವಾರ :ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್ ಸಲ್ಲಿಸಿದ ಹಿನ್ನೆಲೆಯಲ್ಲಿ ಹೊನ್ನಾವರದ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರಾದ ಪರೇಶ್ ಮೇಸ್ತಾ ಕುಟುಂಬದ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ.
ಹೊನ್ನಾವರದ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರಾದ ವಕೀಲ ನಾಗರಾಜ ನಾಯಕ, ಬಿ ರಿಪೋರ್ಟ್ ಹಾಕಿದ ಹಿನ್ನೆಲೆಯಲ್ಲಿ ತಮಗೆ ತಕರಾರಿಗೆ ಅವಕಾಶ ಮಾಡಿಕೊಡುವಂತೆ ನ್ಯಾಯಾಲಯದ ಮುಂದೆ ಮನವಿ ಮಾಡಿದ್ದಾರೆ. ಅದರಂತೆ ವರದಿಗೆ ಸಮ್ಮತಿಯಿಲ್ಲದ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಕೆಗೆ ನ್ಯಾಯಾಲಯ ಕೂಡ ಡಿಸೆಂಬರ್ 21 ರಂದು ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದೆ.
ಪರೇಶ್ ಮೇಸ್ತಾ ಪ್ರಕರಣ: 2017ರ ಡಿಸೆಂಬರ್ 6 ರಂದು ನಾಪತ್ತೆಯಾಗಿದ್ದ ಯುವಕ ಪರೇಶ್ ಮೇಸ್ತಾ ಡಿಸೆಂಬರ್ 8 ರಂದು ಪಟ್ಟಣದ ಶೆಟ್ಟಿಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ. ಯುವಕನ ಸಾವಿನ ಕುರಿತು ಶಂಕೆ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.