ಕಾರವಾರ(ಉತ್ತರ ಕನ್ನಡ):ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿಯಾಗಿ ಓರ್ವ ಮೃತಪಟ್ಟು, 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ತಿರುವಿನಲ್ಲಿ ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದೆ.
ಜಲವಳ್ಳ ಕರ್ಕಿಯ ಹನುಮಂತ ರಾಮ ಪೂಜಾರಿ ಮೃತರು. ಗೇರುಸೊಪ್ಪ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ಖರ್ವಾ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಹನುಂಮತ ರಾಮ ಪೂಜಾರಿ ತೀವ್ರ ಗಾಯಗೊಂಡಿದ್ದರು. ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.