ಶಿರಸಿ:ಬೆಳಗಾವಿ, ಕಾರವಾರವನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಅಜಿತ್ ಪವಾರ್ ಅವರ ಹೇಳಿಕೆ ಉದ್ಧಟತನದಿಂದ ಕೂಡಿದೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪವಾರ್ ಹೇಳಿಕೆ ಉದ್ಧಟತನದಿಂದ ಕೂಡಿದೆ: ಸಚಿವ ಹೆಬ್ಬಾರ್ ಆಕ್ರೋಶ - Minister shivaram Hebbar news
ಬೆಳಗಾವಿ, ಕಾರವಾರವನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಅಜಿತ್ ಪವಾರ್ ಹೇಳಿಕೆಯನ್ನು ಸಚಿವ ಶಿವರಾಮ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ. ಅವರ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತನ್ನು ಜಿಲ್ಲೆಯ ಜನ ಕೊಡುವುದಿಲ್ಲ. ಇದಕ್ಕೆ ಮಹತ್ವ ಕೊಡುವ ಅವಶ್ಯಕತೆಯೂ ಇಲ್ಲ ಎಂದಿದ್ದಾರೆ.
ಸಚಿವ ಹೆಬ್ಬಾರ್ ಆಕ್ರೋಶ
ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿರುವ ಅವರು, ಪವಾರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕಾರವಾರ ಉತ್ತರ ಕನ್ನಡದ ಭಾಗವಾಗಿರುವ ಕಾರಣ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಪವಾರ್ ಅವರ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತನ್ನು ಜಿಲ್ಲೆಯ ಜನ ಕೊಡುವುದಿಲ್ಲ. ಇದಕ್ಕೆ ಮಹತ್ವ ಕೊಡುವ ಅವಶ್ಯಕತೆಯೂ ಇಲ್ಲ. ಕರ್ನಾಟಕದ ಒಂದಿಂಚು ನೆಲವನ್ನೂ ಬಿಟ್ಟುಕೊಡುವುದಿಲ್ಲ ಎಂದಿದ್ದಾರೆ.