ಶಿರಸಿ:ಸಮ್ಮಿಶ್ರ ಸರ್ಕಾರದ ವಿರುದ್ಧ ಹಾಗೂ ಅತೃಪ್ತ ಶಾಸಕರ ರಾಜೀನಾಮೆಯನ್ನು ತಕ್ಷಣ ಅಂಗೀಕರಿಸುವಂತೆ ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿಯ ನೂರಾರು ಕಾರ್ಯಕರ್ತರು ನಗರದ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಒತ್ತಾಯ: ಬಿಜೆಪಿಯಿಂದ ಪ್ರತಿಭಟನೆ - undefined
ಸರ್ಕಾರವನ್ನು ಮುನ್ನಡೆಸಡುವ ಸಂಖ್ಯಾ ಬಲ ಕಾಂಗ್ರೆಸ್ ಜೆಡಿಎಸ್ ಸರ್ಕಾರಕ್ಕೆ ಇಲ್ಲ. ಆದ್ದರಿಂದ ಸರ್ಕಾರ ಮುಂದುವರೆಸುವ ಯಾವುದೇ ನೈತಿಕ ಹಕ್ಕಿಲ್ಲ. ಆದ ಕಾರಣ ತಕ್ಷಣವೇ ಮುಖ್ಯ ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
![ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಒತ್ತಾಯ: ಬಿಜೆಪಿಯಿಂದ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-3794705-thumbnail-3x2-.jpg)
ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಶಿರಸಿಯಲ್ಲಿ ಪ್ರತಿಭಟನೆ ನಡೆಸಿದರು.
ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಬೇಕೆಂದು ಬಿಜೆಪಿ ಕಾರ್ಯಕರ್ತರು ಶಿರಸಿಯಲ್ಲಿ ಪ್ರತಿಭಟನೆ ನಡೆಸಿದರು.
ಸರ್ಕಾರವನ್ನು ಮುನ್ನಡೆಸುವ ಸಂಖ್ಯಾ ಬಲ ಕಾಂಗ್ರೆಸ್-ಜೆಡಿಎಸ್ ಸರ್ಕಾರಕ್ಕೆ ಇಲ್ಲ. ಆದ್ದರಿಂದ ಸರ್ಕಾರ ಮುಂದುವರೆಸುವ ಯಾವುದೇ ನೈತಿಕ ಹಕ್ಕಿಲ್ಲ. ಆದ ಕಾರಣ ತಕ್ಷಣವೇ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದೇ ವೇಳೆ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.