ಉತ್ತರಕನ್ನಡ: ಉಪ ಚುನಾವಣೆಯ ಹಿನ್ನಲೆಯಲ್ಲಿ ಯಲ್ಲಾಪುರ ಪಟ್ಟಣದ ಮತಗಟ್ಟೆ ನಂ. 34ರಲ್ಲಿ ಹಾಕಿದ್ದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಭಾವಚಿತ್ರವನ್ನ ಬಿಜೆಪಿ ಕಾರ್ಯಕರ್ತರ ಒತ್ತಾಯದ ಮೇರೆಗೆ ತೆರವುಗೊಳಿಸಲಾಯಿತು.
ಯಲ್ಲಾಪುರ ಮತಗಟ್ಟೆಯಲ್ಲಿ ಹಾಕಿದ್ದ ಕಾಂಗ್ರೆಸ್ ಅಭ್ಯರ್ಥಿ ಭಾವಚಿತ್ರ ತೆರವು - ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ
ಉಪ ಚುನಾವಣೆಯ ಹಿನ್ನಲೆಯಲ್ಲಿ ಯಲ್ಲಾಪುರ ಪಟ್ಟಣದ ಮತಗಟ್ಟೆ ನಂ. 34ರಲ್ಲಿ ಹಾಕಿದ್ದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಭಾವಚಿತ್ರವನ್ನ ಬಿಜೆಪಿ ಕಾರ್ಯಕರ್ತರ ಒತ್ತಾಯದ ಮೇರೆಗೆ ತೆರವುಗೊಳಿಸಲಾಯಿತು.

ಯಲ್ಲಾಪುರ ಮತಗಟ್ಟೆಯಲ್ಲಿ ಹಾಕಿದ್ದ ಕಾಂಗ್ರೆಸ್ ಅಭ್ಯರ್ಥಿ ಭಾವಚಿತ್ರ ತೆರವು
ಯಲ್ಲಾಪುರ ಮತಗಟ್ಟೆಯಲ್ಲಿ ಹಾಕಿದ್ದ ಕಾಂಗ್ರೆಸ್ ಅಭ್ಯರ್ಥಿ ಭಾವಚಿತ್ರ ತೆರವು
ಮತಗಟ್ಟೆಯ ಹೊರಗಡೆ ಅಭ್ಯರ್ಥಿಯ ಭಾವಚಿತ್ರ ಪ್ರದರ್ಶನಕ್ಕೆ ನಿಷೇಧವಿದ್ದರೂ ಪೊಲೀಂಗ್ ಏಜೆಂಟ್ಗಳು ಭೀಮಣ್ಣ ನಾಯ್ಕ ಭಾವಚಿತ್ರ ಇರುವ ಬ್ಯಾನರ್ ಅಳವಡಿಸಿ, ಮತದಾರರನ್ನು ಸೆಳೆಯುವ ತಂತ್ರಕ್ಕೆ ಮೊರೆ ಹೋಗಿದ್ದರು. ಇದನ್ನು ಆಕ್ಷೇಪಿಸಿದ ಬಿಜೆಪಿ ಕಾರ್ಯಕರ್ತರು, ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.
ನಿಯೋಜಿತಗೊಂಡಿದ್ದ ಪೊಲೀಸ್ ಅಧಿಕಾರಿಗಳು, ಅದನ್ನು ತಕ್ಷಣ ತೆಗೆದು ಹಾಕುವಂತೆ ಕಾಂಗ್ರೆಸ್ ಏಜೆಂಟ್ರಿಗೆ ಸೂಚನೆ ನೀಡಿದ್ದು, ಅಧಿಕಾರಿಗಳ ಸೂಚನೆಯಂತೆ ಭಾವಚಿತ್ರವನ್ನು ತೆಗೆದು ಹಾಕಲಾಯಿತು.