ಭಟ್ಕಳ:ಶಿರಾಲಿಯಿಂದ ಭಟ್ಕಳ ಕಡೆ ಬರುತ್ತಿದ್ದ ಪಿಕ್‍ಅಪ್ ವಾಹನವೊಂದು ಚಾಲಕನ ಅಜಾರೂಕತೆಯಿಂದಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವನ್ನು ವಾಹನ ಸುಮಾರು 200ಮೀ. ದೂರ ಎಳೆದುಕೊಂಡು ಹೋದ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಶಿಫಾ ಕ್ರಾಸ್ ಬಳಿ ನಡೆದಿದೆ.
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು 200 ಮೀ. ಎಳೆದುಕೊಂಡು ಹೋದ ಪಿಕ್‍ಅಪ್ ವಾಹನ: VIDEO
ಶಿರಾಲಿಯಿಂದ ಭಟ್ಕಳ ಕಡೆ ಬರುತ್ತಿದ್ದ ಪಿಕ್ ಅಪ್ ವಾಹನವೊಂದು ಚಾಲಕನ ಅಜಾಗರೂಕತೆಯಿಂದಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಪಿಕ್‍ಅಪ್ ವಾಹನದಲ್ಲಿ ರೇತಿ(ಮರಳು) ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಶಿರಾಲಿ ಚೆಕ್ ಪೋಸ್ಟ್ ಬಳಿ ಪೊಲೀಸರು ಅಡ್ಡಗಟ್ಟಿದ್ದರು. ಈ ಸಂದರ್ಭದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಅತಿವೇಗವಾಗಿ ವಾಹನ ಚಲಾಯಿಸಿಕೊಂಡು ಭಟ್ಕಳದ ಕಡೆಗೆ ಬಂದ ಪಿಕ್‍ಅಪ್ ವಾಹನದಲ್ಲಿ ಶಿಫಾ ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಹೆಸ್ಕಾಂ ಇಲಾಖೆಗೆ ₹ 15 ಸಾವಿರ ನಷ್ಟವುಂಟಾಗಿದ್ದು ಅಪಘಾತ ಮಾಡಿದ ವ್ಯಕ್ತಿಯೇ ಹಣವನ್ನು ಭರಿಸಿದ್ದಾನೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.ಈ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:
bhatkal news