ಶಿರಸಿ :ಮೊಬೈಲ್‌ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಮೊಬೈಲ್ ಎಗರಿಸಿದ್ದ ಆರೋಪಿಯನ್ನು ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಉಸುರಿಯ ದರ್ಶನ್ ಕೃಷ್ಣಾ ನಾಯ್ಕ್ ಮಾಡನಕೇರಿ ಬಂಧಿತ ಆರೋಪಿ. ಕೆರೆಗುಂಡಿ ರಸ್ತೆಯ ಬಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 7 ಸಾವಿರ ಮೌಲ್ಯದ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಲಾದ ಬೈಕ್‌ಅನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಲಾಗಿದೆ.