ಶಿರಸಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಯುವಕನನ್ನು ಬಂಧಿಸಿದ್ದಾರೆ.
ಅಕ್ರಮ ಗಾಂಜಾ ಮಾರಾಟ: ಯುವಕನ ಬಂಧನ - ಅಕ್ರಮ ಗಾಂಜಾ ಮಾರಾಟ
ಶಿರಸಿಯ ಕಲ್ಕಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
Police arrest
ಧಾರವಾಡ ಜಿಲ್ಲೆಯ ಸುನೀಲ್ ಶ್ರೀನಿವಾಸ ಬಳ್ಳಾರಿ (20) ಬಂಧಿತ ಯುವಕ. ಈತ ಧಾರವಾಡದಿಂದ ಬಂದು ಕಲ್ಕುಣಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದನು. ಈ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಸುಮಾರು 25 ಸಾವಿರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ನಗರ ಠಾಣೆ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.