ಕಾರವಾರ: ಉತ್ತರಕನ್ನಡ ಜಿಲ್ಲೆಯಾದ್ಯಂತ ಒಟ್ಟು 69 ಪ್ರಕರಣಗಳಲ್ಲಿ ವಶಕ್ಕೆ ಪಡೆದಿದ್ದ 75ಕ್ಕೂ ಹೆಚ್ಚು ಕೆಜಿ ತೂಕದ ಮಾದಕ ದ್ರವ್ಯಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪೆನ್ನೇಕರ್ ಸಮ್ಮುಖದಲ್ಲಿ ಪೊಲೀಸರು ನಾಶಪಡಿಸಿದ್ದಾರೆ.
ಅಂತಾರಾಷ್ಟ್ರೀಯ ಮಾದಕ ದ್ರವ್ಯ ಹಾಗೂ ಕಳ್ಳಸಾಗಣೆ ವಿರೋಧಿ ದಿನದ ಅಂಗವಾಗಿ ಕಳೆದೊಂದು ವರ್ಷದ ಅವಧಿಯಲ್ಲಿ ಜಿಲ್ಲೆಯಾದ್ಯಂತ ವಶಕ್ಕೆ ಪಡೆಯಲಾಗಿದ್ದ ಮಾಧಕ ದ್ರವ್ಯಗಳನ್ನು ಅಂಕೋಲಾ ತಾಲೂಕಿನ ಬೊಗ್ರಿಬೈಲ್ ನ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ . ಸುಮನ್ ಪೆನ್ನೇಕರ್, ವಿಲೇವಾರಿ ಸಮಿತಿ ಸದಸ್ಯರು ಹಾಗೂ ಪಂಚರ ಸಮ್ಮುಖದಲ್ಲಿ ನಾಶಪಡಿಸಲಾಯಿತು.