ಕಾರವಾರ: ವಿರೋಧದ ನಡುವೆಯೂ ಬಂದರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಹೊನ್ನಾವರದ ಕಾಸರಕೋಡು ಬಂದರು ಬಳಿ ನಡೆದಿದೆ.
ಹೊನ್ನಾವರ ಖಾಸಗಿ ಬಂದರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಮೀನುಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ, ಭಾನುವಾರ ಮೀನುಗಾರರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮೀನುಗಾರರಿಗೆ ಯಾವುದೇ ತೊಂದರೆಯಾಗದಂತೆ ರಸ್ತೆ ನಿರ್ಮಾಣ ಮಾಡಲಾಗುವುದು ಎಂದಿದ್ದರು. ಆದರೆ, ಇದಕ್ಕೆ ಸಭೆಯಲ್ಲಿಯೂ ತೀವ್ರ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ.
ಸೋಮವಾರ ಪೊಲೀಸ್ ಭದ್ರತೆಯಲ್ಲಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕಾಮಗಾರಿ ನಡೆಸಲು ಮುಂದಾಗಿದ್ದು, ಸ್ಥಳೀಯ ಮೀನುಗಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.