ಕಾರವಾರ:ದೇಶದಲ್ಲಿ ಉಗ್ರರು ವಿಧ್ವಂಸಕ ಕೃತ್ಯವೆಸಗಿಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ಐಎನ್‌ಎಸ್ ಕದಂಬ ನೌಕಾನೆಲೆ ಸೇರಿದಂತೆ ಕರಾವಳಿ ತೀರದುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ.
ಜಿಲ್ಲಿಯಾದ್ಯಂತ ಹೈ ಅಲರ್ಟ್ ಘೋಷಿಸಿರುವುದು ಕಾಶ್ಮಿರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿ ಕೇಂದ್ರ ಸರ್ಕಾರ ತೆಗೆದುಕೊಂಡ ನಿಲುವಿನಿಂದಾಗಿ ಉಗ್ರರು ದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಅದರಂತೆ ದೇಶದಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಅದೇ ರೀತಿ ದೇಶದ ಅತಿ ದೊಡ್ಡ ನೌಕಾನೆಲೆಯಲ್ಲಿ ಒಂದಾದ ಕಾರವಾರ ಐಎನ್‌ಎಸ್ ಕದಂಬ ನೌಕಾನೆಲೆಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇಲ್ಲಿನ ಪ್ರಮುಖ ಗೇಟ್ಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಹೊರ ಹೋಗುವ ಮತ್ತು ಒಳ ಬರುವವರ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ ಎಂದು ನೌಕಾನೆಲೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅಜಯ್ ಕಫೂರ್ ತಿಳಿಸಿದ್ದಾರೆ.
ಜಿಲ್ಲೆಯ ಕರಾವಳಿ ತೀರದಲ್ಲಿಯೂ ಹೆಚ್ಚಿನ ನಿಗಾ ಇಡಲಾಗಿದ್ದು, ಸಮುದ್ರ ಮಾರ್ಗದ ಮೂಲಕ ಉಗ್ರರು ನುಸುಳುವು ಸಾಧ್ಯತೆ ಯಿದ್ದು, ರಾಜ್ಯ ಹಾಗೂ ಹೊರ ರಾಜ್ಯದ ಮೀನುಗಾರಿಕಾ ಬೋಟ್ ಮತ್ತು ಮೀನುಗಾರರ ಮೇಲೆ ಕರಾವಳಿ ಕಾವಲು ಪೊಲೀಸರು, ತಟರಕ್ಷಕ ದಳ ಮತ್ತು ಮೀನುಗಾರಿಕಾ ಇಲಾಖೆ ಹದ್ದಿನ ಕಣ್ಣಿಟ್ಟಿದೆ.