ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಇಂದು ನಡೆದಿದೆ.
ಅಲೆಗಳಿಗೆ ಕೊಚ್ಚಿ ಹೋಗುತ್ತಿದ್ದ ಮೂವರು ವಿದ್ಯಾರ್ಥಿಗಳ ರಕ್ಷಣೆ! - Murdeshwar Beach
ಮುರ್ಡೇಶ್ವರ ಕಡಲ ತೀರದಲ್ಲಿ ಈಜಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿರುವ ಘಟನೆ ನಡೆದಿದೆ.
ಅಲೆಗಳಿಗೆ ಕೊಚ್ಚಿಹೊಗುತ್ತಿದ್ದ ಮೂವರು ವಿದ್ಯಾರ್ಥಿಗಳ ರಕ್ಷಣೆ
ಗೋವಾದ ಬಿಬಿಡಿ ಕಾಲೇಜಿನ ರತೀಕ್ ರಾಜ್ (19), ಅಂಕುಶ್ ಸಿಂಗ್ (19), ರಾಜೀವ್ ಮುಖರ್ಜಿ (18) ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳು. ಗೋವಾದಿಂದ ಮುರ್ಡೇಶ್ವರಕ್ಕೆ ಸುಮಾರು 30 ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ನೀರಲ್ಲಿ ಈಜಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿದ್ದ ಮೂವರು ವಿದ್ಯಾರ್ಥಿಗಳು ಕೊಚ್ಚಿ ಹೋಗುತ್ತಿದ್ದರು. ತಕ್ಷಣ ಇತರ ವಿದ್ಯಾರ್ಥಿಗಳು ಕೂಗಿಕೊಂಡಾಗ ಕಡಲ ತೀರದ ಲೈಫ್ ಗಾರ್ಡ್ ಸಿಬ್ಬಂದಿ ತೆರಳಿ ರಕ್ಷಣೆ ಮಾಡಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.