ಶಿರಸಿ: ಸಂಸದ ಅನಂತ ಕುಮಾರ್ ಹೆಗಡೆ ಅವರ ಮಾನಸಿಕ ಸ್ಥಿತಿ ಹದಗೆಟ್ಟಿದೆ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಮಹಾತ್ಮರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಸದ ಅನಂತಕುಮಾರ್ರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ: ನಾಯ್ಕ - ಅನಂತಕುಮಾರ ಹೆಗಡೆ ವಿರುದ್ಧ ಹೋರಾಟ
ಸಂಸದ ಅನಂತಕುಮಾರ್ ಹೆಗಡೆ ಅವರ ಮಾನಸಿಕ ಸ್ಥಿತಿ ಹದಗೆಟ್ಟಿದೆ. ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಮಹಾತ್ಮರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ನಾವು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ
ನಗರದ ಬಿಡಕಿ ಬಯಲಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ, ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅನಂತ್ಕುಮಾರ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು.
ಮಹಾತ್ಮರಿಗೆ ಅವಮಾನಿಸುವ ಸಂಸದರನ್ನು ಲೋಕಸಭೆಯಿಂದ ಉಚ್ಛಾಟಿಸಬೇಕು ಎಂದು ಆಗ್ರಹಿಸಿದರು.