ಭಟ್ಕಳ:ಮುರುಡೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೇ ಇರುವುದರಿಂದ ಮತ್ತು ಪಟ್ಟಣದ ರಸ್ತೆ ಅಗಲೀಕರಣ ಆಗಬೇಕೆಂದು ಸಾರ್ವಜನಿಕರು ಮತ್ತು ರಿಕ್ಷಾ ಚಾಲಕರು ಆಗ್ರಹಿಸಿ ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಭಟ್ಕಳದಲ್ಲಿ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ - road widening news
ಮುರುಡೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಸರಿಯಾದ ರಸ್ತೆ ವ್ಯವಸ್ಥೆಯಿಲ್ಲದೇ ಇರುವುದರಿಂದ ಮತ್ತು ಪಟ್ಟಣದ ರಸ್ತೆ ಅಗಲೀಕರಣ ಆಗಬೇಕೆಂದು ಸಾರ್ವಜನಿಕರು ಮತ್ತು ರಿಕ್ಷಾ ಚಾಲಕರು ಆಗ್ರಹಿಸಿ ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
![ಭಟ್ಕಳದಲ್ಲಿ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ Bhatkal](https://etvbharatimages.akamaized.net/etvbharat/prod-images/768-512-5977222-thumbnail-3x2-ksv.jpg)
ಸಾರ್ವಜನಿಕರ ಆಗ್ರಹ
ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ
ನಗರದ ಮುರುಡೇಶ್ವರಕ್ಕೆ ಹೆಚ್ಚು ಪ್ರವಾಸಿಗರು ಬರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಪೊಲೀಸ್ ಸ್ಟೇಷನ್ ಬದಿಯ ರಥಬೀದಿಯು ಕನಿಷ್ಠ 6 ತಿಂಗಳು ಧಾರ್ಮಿಕ ಕಾರ್ಯಕ್ರಮ ಹಾಗೂ ಇತರೆ ಚಟುವಟಿಕೆಗಳಲ್ಲಿ ಒಳಪಟ್ಟಿರುವುದರಿಂದ ಯಾವುದೇ ಕಾರಣಕ್ಕೂ ಏಕಮುಖ ಸಂಚಾರಕ್ಕೆ ಅನುಕೂಲ ಆಗುವುದಿಲ್ಲ ಎಂದು ಊರಿನ ಸಾರ್ವಜನಿಕರು ಮತ್ತು ರಿಕ್ಷಾ ಚಾಲಕರು ಆಗ್ರಹಿಸಿದರು.
ಇನ್ನು 16 ಮೀ ರಂತೆ ಮುರುಡೇಶ್ವರ ದೇವಸ್ತಾನದವರೆಗೂ ರಸ್ತೆ ಅಗಲೀಕರಣ ಮಾಡಿ ಅಭಿವೃದ್ಧಿ ಮಾಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಸಲ್ಲಿಸಿದರು.