ಕರ್ನಾಟಕ

karnataka

ETV Bharat / state

ತಿಂಗಳ ಹಿಂದೆ ಅಣಿಶಿ ಗುಡ್ಡ ಕುಸಿತ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಗ್ರಾಮಸ್ಥರಿಂದಲೇ ಗುಡ್ಡ ತೆರವು

ಗುಡ್ಡ ಕುಸಿತದ ಪರಿಣಾಮ ನಿತ್ಯ ಉದ್ಯೋಗ, ಕಚೇರಿ, ಪೇಟೆ.. ಹೀಗೆ ಹತ್ತಾರು ಕಾರಣದಿಂದಾಗಿ ಜಿಲ್ಲಾ ಕೇಂದ್ರವನ್ನು ಸಂಪರ್ಕಿಸುತ್ತಿದ್ದವರಿಗೆ ಸಮಸ್ಯೆ ಎದುರಾಗಿತ್ತು. ನಿತ್ಯ ನೂರಾರು ಕಿ.ಮೀ ಸುತ್ತಿಬಳಸಿ ಓಡಾಡಬೇಕಾದ ಸ್ಥಿತಿ ಇತ್ತು. ಇದೀಗ ಈ ಎಲ್ಲಾ ಸಮಸ್ಯೆಗಳಿಗೆ ಗ್ರಾಮಸ್ಥರೇ ಪರಿಹಾರ ಕಂಡುಕೊಂಡಿದ್ದಾರೆ.

public-joins-hands-to-remove-mud-from-road-at-karwar
ಅಣಿಶಿ ಗುಡ್ಡ ಕುಸಿತ ತೆರವುಗೊಳಿಸಲು ಅಧಿಕಾರಿಗಳ ನಿರ್ಲಕ್ಷ್ಯ

By

Published : Aug 26, 2021, 12:25 PM IST

Updated : Aug 26, 2021, 2:07 PM IST

ಕಾರವಾರ (ಉ.ಕ):: ಕೆಲವು ದಿನಗಳ ಹಿಂದೆ ಅಬ್ಬರಿಸಿದ್ದ ಮಳೆ ಸದ್ಯ ತಣ್ಣಗಾಗಿದೆ. ಆದರೆ, ಮಳೆಯ ಆರ್ಭಟಕ್ಕೆ ರಾಜ್ಯ ಹೆದ್ದಾರಿಯಲ್ಲಿ ಉಂಟಾಗಿರುವ ಹಾನಿ ಜನಸಾಮಾನ್ಯರ ಬದುಕಿಗೆ ಕಂಟಕವಾಗಿತ್ತು. ಅಣಿಶಿ ಗುಡ್ಡ ಕುಸಿತದ ಪರಿಣಾಮ ಜಿಲ್ಲಾ ಕೇಂದ್ರದ ಸಂಪರ್ಕವನ್ನೇ ಕಳೆದುಕೊಂಡಿದ್ದವು.

ಗುಡ್ಡ ತೆರವುಗೊಳಿಸುವಂತೆ ಸ್ಥಳೀಯರು ಹತ್ತಾರು ಬಾರಿ ಮನವಿ ಮಾಡಿದ್ದರೂ ಸಹ ಅಧಿಕಾರಿಗಳು ಮಾತ್ರ ಗುಡ್ಡ ಇನ್ನಷ್ಟು ಕುಸಿಯುವ ಭೀತಿಯ ಕಥೆ ಹೇಳುತ್ತಾ ದಿನ ದೂಡತೊಡಗಿದ್ದರು. ಆದರೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜನರೇ ತಾತ್ಕಾಲಿಕ ದಾರಿ ಮಾಡಿಕೊಂಡಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಗ್ರಾಮಸ್ಥರಿಂದಲೇ ಗುಡ್ಡ ತೆರವು

ಭಾರೀ ಮಳೆಯಿಂದಾಗಿ ಕಾರವಾರ-ಬೆಳಗಾವಿ ಸಂಪರ್ಕಿಸುವ ಸದಾಶಿವಗಡ ಔರಾದ್ ರಾಜ್ಯ ಹೆದ್ದಾರಿಯ ಅಣಶಿ ಘಟ್ಟದಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿತ್ತು. ಹೆದ್ದಾರಿ ಸಹಿತವಾಗಿ ನೂರಾರು ಅಡಿಗಳ ಆಳಕ್ಕೆ ಭೂಮಿ ಕುಸಿದ ಪರಿಣಾಮ ಜೋಯಿಡಾ, ದಾಂಡೇಲಿ ಹಾಗೂ ಹಳಿಯಾಳ‌ ತಾಲೂಕುಗಳ ಸಂಪರ್ಕವೇ ಬಂದ್ ಆಗಿತ್ತು.

ನಡೆದಾಡಲು ಕಾಲುದಾರಿ ಸಹ ಇಲ್ಲದೆ ಜನರು ಸಂಕಷ್ಟ ಎದುರಿಸಿದ್ದರು. ಈ ಹಿನ್ನೆಲೆ ವಿವಿಧ ಗ್ರಾಮ ಪಂಚಾಯತ್​ಗಳ ವ್ಯಾಪ್ತಿಯ ಸುಮಾರು 50ಕ್ಕೂ ಹೆಚ್ಚು ಮಂದಿ ಒಟ್ಟಾಗಿ ಗುಡ್ಡ ತೆರವು ಕಾರ್ಯ ಮಾಡಿ ಓಡಾಡಲು ಮಾರ್ಗ ಕಂಡುಕೊಂಡಿದ್ದಾರೆ.

ಈ ಮೊದಲು ಜಿಲ್ಲಾ ಕೇಂದ್ರಕ್ಕೆ ಆಗಮಿಸಬೇಕೆಂದರೆ ಹತ್ತಾರು ಕಿ.ಮೀ ದೂರ ಸುತ್ತಾಡಿ ಬರಬೇಕಿತ್ತು. ಇದರಿಂದ ಬೇಸತ್ತಿದ್ದ ಗ್ರಾಮಸ್ಥರು ತಾವಾಗಿಯೇ ಗುಡ್ಡ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ. ಇತ್ತ ಗುಡ್ಡ ತೆರವು ಕಾರ್ಯಾಚರಣೆ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಗ್ರಾಮಸ್ಥರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗುಡ್ಡ ಕುಸಿತದ ಪ್ರದೇಶದಲ್ಲಿ ಪರಿಶೀಲನೆ ನಡೆಸಿ ಮುಂಬರುವ ದಿನದಲ್ಲಿ ಶಾಶ್ವತ ಪರಿಹಾರ ಕಾಮಗಾರಿ ನಡೆಸುವುದಾಗಿಯೂ ತಿಳಿಸಿದ್ದಾರೆ.

ಓದಿ:ಕೋಲಾರದಲ್ಲಿ ಧಾರಾಕಾರ ಮಳೆಗೆ ಬೆಳೆ ನೀರುಪಾಲು; ಅನ್ನದಾತ ಕಂಗಾಲು

Last Updated : Aug 26, 2021, 2:07 PM IST

ABOUT THE AUTHOR

...view details