ಕರ್ನಾಟಕ

karnataka

ETV Bharat / state

ಕರಾವಳಿಯಲ್ಲಿ ಮುಂದುವರೆದ ಮಳೆ: ಸರ್ಕಾರಿ, ಖಾಸಗಿ ಶಾಲೆಗಳಿಗೆ ಇಂದು ರಜೆ ಘೊಷಣೆ

ಕರಾವಳಿ ಭಾಗದಲ್ಲಿ ತೀವ್ರ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಕರಾವಳಿ

By

Published : Jul 23, 2019, 10:27 AM IST

Updated : Jul 23, 2019, 2:14 PM IST

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೇ ಮಳೆ ಸುರಿಯುತ್ತಿರುವ‌ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಕರಾವಳಿಯ ಐದು ತಾಲೂಕುಗಳ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರಾವಳಿಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ‌ ತಾಲೂಕಿನ ಶಾಲೆಗಳಿಗೆ ಇಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಸೂಚನೆ ಮೇರೆಗೆ ಡಿಡಿಪಿಐ ಹಾಗೂ ಡಿಡಿಸಿ ಅವರು ರಜೆ ಘೋಷಣೆ ಮಾಡಿದ್ದಾರೆ.

ಕಳೆದ ಮೂರು ದಿನದಿಂದ ಜಿಲ್ಲಾದ್ಯಂತ ಭಾರಿ ಮಳೆಯಾಗುತ್ತಿದ್ದು, ಕರಾವಳಿಯಲ್ಲಿ ಇದರ ಪ್ರಮಾಣ ಹೆಚ್ಚಾಗಿದೆ. ಅಲ್ಲದೆ ಮಳೆ ನೀರಿನಿಂದ ಬಹುತೇಕ ತಗ್ಗು ಪ್ರದೇಶಗಳು ತುಂಬಿದ್ದು, ಚರಂಡಿಗಳು ತುಂಬಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ. ಉಡುಪಿ ಮಂಗಳೂರಿನಲ್ಲಿ ಸಹ ತೀರ್ವ ಮಳೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Last Updated : Jul 23, 2019, 2:14 PM IST

For All Latest Updates

TAGGED:

ABOUT THE AUTHOR

...view details