ಕಾರವಾರ :ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆ ಇಂದು ಮಧ್ಯಾಹ್ನದ ಬಳಿಕ ಜೋರಾಗಿದೆ. ನದಿ ಪಾತ್ರದ ಜನರಲ್ಲಿ ಆತಂಕ ಶುರುವಾಗಿದೆ.
ಉತ್ತರ ಕನ್ನಡದಲ್ಲಿ ಮತ್ತೆ ಚುರುಕಾದ ಮಳೆ, ಆತಂಕದಲ್ಲಿ ನದಿಪಾತ್ರದ ಜನ - ಕರಾವಳಿ ಮಳೆ ಸುದ್ದಿ
ಕಡಲಿನಲ್ಲಿ ಅಲೆಗಳ ಅಬ್ಬರ ಕೂಡ ಜೋರಾಗಿದೆ. ಮೀನುಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಘಟ್ಟದ ಮೇಲ್ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿಯೂ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ ಮುಂದುವರಿದಿದೆ..
![ಉತ್ತರ ಕನ್ನಡದಲ್ಲಿ ಮತ್ತೆ ಚುರುಕಾದ ಮಳೆ, ಆತಂಕದಲ್ಲಿ ನದಿಪಾತ್ರದ ಜನ rain fall](https://etvbharatimages.akamaized.net/etvbharat/prod-images/768-512-8881454-thumbnail-3x2-jaydjpg.jpg)
ಜಿಲ್ಲೆಯ ಕರಾವಳಿಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆ ಇಂದು ಬೆಳಗ್ಗೆ ಸ್ವಲ್ಪ ಕಡಿಮೆಯಾಗಿತ್ತು. ಆದರೆ, ಮಧ್ಯಾಹ್ನದ ಬಳಿಕ ಮಳೆ ಅಬ್ಬರ ಜೋರಾಗಿದೆ. ಮಳೆ ಮುಂದುವರಿಯುವ ಲಕ್ಷಣ ಗೋಚರವಾಗಿದೆ. ಗಂಗಾವಳಿ, ಅಘನಾಶಿನಿ ನದಿ ಹರಿವು ಹೆಚ್ಚತೊಡಗಿದ್ದು, ಅಂಕೋಲಾ, ಗೋಕರ್ಣ, ಕುಮಟಾ ಭಾಗದ ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚತೊಡಗಿದೆ.
ಕಡಲಿನಲ್ಲಿ ಅಲೆಗಳ ಅಬ್ಬರ ಕೂಡ ಜೋರಾಗಿದೆ. ಮೀನುಗಾರಿಕೆ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಘಟ್ಟದ ಮೇಲ್ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿಯೂ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ ಮುಂದುವರಿದಿದೆ.