ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ ಅಬ್ಬರ ಮುಂದುವರೆದಿದ್ದು, ಕರಾವಳಿ ಸೇರಿದಂತೆ ಘಟ್ಟದ ಮೇಲ್ಭಾಗದ ತಾಲೂಕುಗಳಲ್ಲಿ ಇಂದು ಕೂಡ ಅಲ್ಲಲ್ಲಿ ಧಾರಾಕಾರ ಮಳೆ ಸುರಿದಿದೆ.
ಉತ್ತರ ಕನ್ನಡದಲ್ಲಿ ನಿಲ್ಲದ ಅಕಾಲಿಕ ಮಳೆ ಅಬ್ಬರ: ರೈತರು ಕಂಗಾಲು
ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕಾಲಿಕ ಮಳೆ ಅಬ್ಬರ ಜೋರಾಗಿದೆ. ಅಡಿಕೆ ತೋಟಗಳಿಗೆ ಹಾನಿಯಾಗುವ ಆತಂಕ ರೈತರಲ್ಲಿ ಮನೆ ಮಾಡಿದೆ.
ಉತ್ತರಕನ್ನಡದಲ್ಲಿ ನಿಲ್ಲದ ಅಕಾಲಿಕ ಮಳೆ ಅಬ್ಬರ
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಜಿಲ್ಲೆಯ ಜನರನ್ನು ಚಿಂತೆಗೀಡು ಮಾಡಿದೆ. ಬೆಳಗ್ಗೆಯಿಂದ ಬಿಸಿಲು ಬಿದ್ದು ಸಂಜೆ ಹೊತ್ತಿಗೆ ಏಕಾಏಕಿ ಮಳೆಯಾಗತೊಡಗಿದೆ. ಜಿಲ್ಲೆಯ ಘಟ್ಟದ ಮೇಲ್ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರ, ಕರಾವಳಿಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ.
ಅಕಾಲಿಕ ಮಳೆಯಿಂದಾಗಿ ಅಡಿಕೆ, ಭತ್ತ ಕೊಯ್ಲು ಮಾಡಿದ್ದ ರೈತರ ಬೆಳೆಗಳು ಮಳೆಗೆ ಹಾಳಾಗುತ್ತಿವೆ. ಅಲ್ಲದೆ ಈ ಅಕಾಲಿಕ ಮಳೆಯಿಂದಾಗಿ ಅಡಿಕೆ ತೋಟಗಳಿಗೆ ಹಾನಿಯಾಗುವ ಆತಂಕ ರೈತರಲ್ಲಿ ಮನೆ ಮಾಡಿದೆ.
Last Updated : Feb 21, 2021, 8:31 PM IST