ಕರ್ನಾಟಕ

karnataka

ETV Bharat / state

ಶಿರಸಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ - Sirsi Rape news

ಸೊರಬದ ಬೆಟ್ಟದ ಕುರ್ಲಿಯ ಹನುಮಂತಪ್ಪ ಕೆಂಚಪ್ಪ ಬಂಧಿತ ಆರೋಪಿ. ಈತನ ವಿರುದ್ಧ ಬಾಲಕಿಯನ್ನು ಕಿಡ್ನಾಪ್‌ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು. ನಂತರ ತನಿಖೆ ಕೈಗೊಂಡ ಪೊಲೀಸರು ಜು.2 ರಂದು ಬಾಲಕಿಯನ್ನು ಪತ್ತೆ ಮಾಡಿದ್ದರು.

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ

By

Published : Aug 4, 2020, 9:01 PM IST

ಶಿರಸಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿ 6 ತಿಂಗಳ ಗರ್ಭಿಣಿಯಾಗಲು ಕಾರಣನಾದ 40 ವರ್ಷದ ವ್ಯಕ್ತಿಯನ್ನು ಶಿರಸಿಯ ಬನವಾಸಿ ಪೊಲೀಸರು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಸೊರಬದ ಬೆಟ್ಟದ ಕುರ್ಲಿಯ ಹನುಮಂತಪ್ಪ ಕೆಂಚಪ್ಪ (40) ಬಂಧಿತ. ಈತನ ವಿರುದ್ಧ ಬಾಲಕಿಯನ್ನು ಕಿಡ್ನಾಪ್‌ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು. ನಂತರ ತನಿಖೆ ಕೈಗೊಂಡ ಪೊಲೀಸರು ಜು.2 ರಂದು ಬಾಲಕಿಯನ್ನು ಪತ್ತೆ ಮಾಡಿದ್ದರು.

ಈಗ ಪೊಲೀಸರಿಗೆ ಹೇಳಿಕೆ ನೀಡಿರುವ ಬಾಲಕಿ, ಜೂ.21, 2019 ರಂದು ನನ್ನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಎರಡು ದಿನಗಳ ನಂತರ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಅಂದಿನಿಂದ ಇಲ್ಲಿಯವರೆಗೆ ನಿರಂತರಾಗಿ ದೈಹಿಕ ಸಂಪರ್ಕ ಬೆಳೆಸಿ ನನ್ನನ್ನು 6 ತಿಂಗಳು ಗರ್ಭಿಣಿಯನ್ನಾಗಿ ಮಾಡಿದ್ದಾನೆ ಎಂದು ದೂರು ನೀಡಿದ್ದಾಳೆ.

ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details