ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸಂಜೆಯಿಂದ ತಡರಾತ್ರಿವರೆಗೂ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಇಂದು ಕೊಂಚ ಬಿಡುವು ನೀಡಿದೆ.
ಉತ್ತರ ಕನ್ನಡದಲ್ಲಿ ತಗ್ಗಿದ ಮಳೆ: ಮುಂದುವರೆದ ಮೋಡ ಕವಿದ ವಾತಾವರಣ - ಕಾರವಾರ ಸುದ್ದಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಕೊಂಚ ಪ್ರಮಾಣದಲ್ಲಿ ತಗ್ಗಿದ್ದು, ಮೋಡ ಕವಿದ ವಾತಾವರಣವಿದೆ.

ಉತ್ತರಕನ್ನಡದಲ್ಲಿ ತಗ್ಗಿದ ಮಳೆ
ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಮಳೆ ಕಡಿಮೆಯಾಗಿದೆ. ಇನ್ನು ಘಟ್ಟದ ಮೇಲ್ಭಾಗದ ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿಯೂ ಮಳೆ ಕಡಿಮೆಯಾಗಿದ್ದು, ಮೋಡ ಕವಿದ ವಾತಾವರಣವಿದೆ.
ಕರಾವಳಿಯಲ್ಲಿ ಇನ್ನೂ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಗಾಳಿಯ ಅಬ್ಬರ ಜೋರಾಗಿದ್ದು, ಕಡಲಿನಲ್ಲಿ ಪ್ರಕ್ಷುಬ್ಧ ವಾತಾವರಣ ಇರುವ ಹಿನ್ನೆಲೆಯಲ್ಲಿ ಮೀನುಗಾರಿಕೆಗೆ ತೆರಳದಂತೆ ಇಲಾಖೆ ಸೂಚನೆ ನೀಡಿದೆ.