ಕರ್ನಾಟಕ

karnataka

By

Published : Aug 10, 2020, 9:59 AM IST

ETV Bharat / state

ಉತ್ತರ ಕನ್ನಡದಲ್ಲಿ ತಗ್ಗಿದ ಮಳೆ ಅಬ್ಬರ... ನದಿಗಳ ಹರಿವಿನಲ್ಲೂ ಇಳಿಕೆ!

ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಕೊಂಚ ಕಡಿಮೆಯಾಗಿದ್ದು. ಉತ್ತರ ಕನ್ನಡದ ಜನತೆ ಸ್ವಲ್ಪ ನಿರಾಳರಾಗಿದ್ದಾರೆ.

Uttarakannada
Uttarakannada

ಕಾರವಾರ:ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದು, ಮಲೆನಾಡಿನಲ್ಲಿ ಮಾತ್ರ ಬಿಟ್ಟು ಬಿಟ್ಟು ಮಳೆ ಸುರಿಯಲಾರಂಭಿಸಿದೆ.

ಕಾರವಾರ ಸೇರಿದಂತೆ ಇತರ ತಾಲೂಕುಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆ ಇಳಿಮುಖಗೊಂಡಿದೆ. ಬೆಳಗ್ಗೆ ಸುರಿಯುವ ಮಳೆ ಮಧ್ಯಾಹ್ನದ ಬಳಿಕ ಎರಡು ದಿನಗಳಿಂದ ಬಿಸಿಲಿನ ವಾತಾವರಣ ಕಂಡು ಬಂದಿದೆ. ಇಂದು ಕೂಡ ಬೆಳಗ್ಗೆ ಉತ್ತಮ ಮಳೆಯಾಗಿದೆ. ಮೋಡ ಕವಿದ ವಾತಾವರಣ ಇದ್ದು, ಮಳೆಯಾಗುವ ಸಾಧ್ಯತೆ ಇದೆ.

ಇನ್ನು ಜಿಲ್ಲೆಯ ಮಲೆನಾಡು ತಾಲೂಕುಗಳಾದ ಶಿರಸಿ, ಸಿದ್ದಾಪುರ, ಯಲ್ಲಾಪುರ ಭಾಗಗಳಲ್ಲಿ ಮಳೆ ಮುಂದುವರೆದಿದೆ. ಬಿಟ್ಟು ಬಿಟ್ಟು ಉತ್ತಮ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ಆದರೆ, ಕಳೆದ ಕೆಲ ದಿನಗಳಿಂದ ಉಕ್ಕಿ ಹರಿಯುತ್ತಿದ್ದ ಜಿಲ್ಲೆಯ ಪ್ರಮುಖ ನದಿಗಳಲ್ಲಿ ಇದೀಗ ನೀರಿನ ಹರಿವು ಕಡಿಮೆಯಾಗಿದ್ದು, ನದಿಯಂಚಿನ ಜನ ಆತಂಕದಿಂದ ಸ್ವಲ್ಪ ನಿರಾಳರಾಗಿದ್ದಾರೆ.

ABOUT THE AUTHOR

...view details