ಕರ್ನಾಟಕ

karnataka

ETV Bharat / state

ಕಟ್ಟಡ ಕುಸಿತದಲ್ಲಿ ಸಾವನ್ನಪ್ಪಿದ ಯುವಕರ ಕುಟುಂಬಕ್ಕೆ ಪರಿಹಾರ: ಹೆಬ್ಬಾರ್​​ ಭರವಸೆ - ಕಾರ್ಮಿಕರ ಕುಟುಂಬ

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿಯ ನಿರ್ಮಾಣ ಹಂತದ ಪಕ್ಕದಲ್ಲಿನ ಕಟ್ಟಡ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಇಲಾಖೆಯಿಂದ ಪರಿಹಾರ ನೀಡಲಾಗುವುದು ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

Sivarama Hebbar
ಶಿವರಾಮ ಹೆಬ್ಬಾರ್ ಭರವಸೆ

By

Published : Feb 28, 2020, 8:13 PM IST

ಶಿರಸಿ: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿಯ ನಿರ್ಮಾಣ ಹಂತದ ಪಕ್ಕದಲ್ಲಿನ ಕಟ್ಟಡ ಕುಸಿದು ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಇಲಾಖೆಯಿಂದ ಪರಿಹಾರ ನೀಡಲಾಗುವುದು ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ಶಿವರಾಮ ಹೆಬ್ಬಾರ್, ಸಚಿವ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಚಿಕಿತ್ಸಾ ವೆಚ್ಚವನ್ನು ಇಲಾಖೆಯಿಂದಲೇ ಭರಿಸಲಾಗುತ್ತದೆ ಎಂದರು.

ಕಟ್ಟಡದ ಮಾಲೀಕನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details