ಕರ್ನಾಟಕ

karnataka

ETV Bharat / state

​​​​​​​ಬಿಜೆಪಿಗೆ ನೆರೆ ಪರಿಹಾರಕ್ಕಿಂತ ಮಹಾರಾಷ್ಟ್ರ ಚುನಾವಣೆಯೇ ಮುಖ್ಯ: ಕೋಡಿಹಳ್ಳಿ ಚಂದ್ರಶೇಖರ್ - Farmer Organization that warned the protest

ರಾಜ್ಯದ ಪ್ರವಾಹ ಪರಿಹಾರವನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳದೇ ಮಹಾರಾಷ್ಟ್ರ ಚುನಾವಣೆ ಪ್ರಚಾರಕ್ಕೆ ತೆರಳಿರುವ ಸಿಎಂ ಬಿಎಸ್​ವೈ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ರೈತ ಸಂಘಟನೆಯ ಕೋಡಿಹಳ್ಳಿ ಚಂದ್ರಶೇಖರ

By

Published : Oct 17, 2019, 11:25 AM IST

Updated : Oct 17, 2019, 3:40 PM IST

ಶಿರಸಿ: ರಾಜ್ಯದಲ್ಲಿ ಸಂಭವಿಸಿದ ಭೀಕರ ಪ್ರವಾಹ ಪರಿಹಾರಕ್ಕಿಂತ ಮಹಾರಾಷ್ಟ್ರದಲ್ಲಿ ನಡೆಯುವ ಚುನಾವಣೆ ಪ್ರಚಾರವೇ ಸಿಎಂಗೆ ಬಹಳ ಮುಖ್ಯವಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಟೀಕಿಸಿದ್ದಾರೆ.

ರೈತ ಸಂಘಟನೆಯ ಕೋಡಿಹಳ್ಳಿ ಚಂದ್ರಶೇಖರ

ಶಿರಸಿ ತಹಶೀಲ್ದಾರ ಕಚೇರಿಯಲ್ಲಿ ಸರ್ಕಾರಿ ಅಧಿಕಾರಿಗಳೊಂದಿಗೆ ಅತಿವೃಷ್ಟಿ ಹಾನಿ ಕುರಿತು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದಾಗಿ ರಾಜ್ಯದಲ್ಲಿ ಸೂತಕದ ಛಾಯೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಯುದ್ಧೋಪಾದಿಯಲ್ಲಿ ಪರಿಹಾರ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕು. ಅದನ್ನು ಬಿಟ್ಟು ಮುಖ್ಯಮಂತ್ರಿ ಬಿಎಸ್​ವೈ ಚುನಾವಣೆ ಪ್ರಚಾರಕ್ಕೆ ತೆರಳಿರುವುದು ಸರಿಯಲ್ಲ. ಇದನ್ನು ಖಂಡಿಸಿ ರೈತ ನಾಯಕರೊಂದಿಗೆ ಸಭೆ ನಡೆಸಿ ಹೋರಾಟ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.

Last Updated : Oct 17, 2019, 3:40 PM IST

For All Latest Updates

TAGGED:

ABOUT THE AUTHOR

...view details