ಕಾರವಾರ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿವೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಹುಲಿದೇವರವಾಡದಲ್ಲಿ ನಡೆದಿದೆ.
ಕಾರವಾರದಲ್ಲಿ ಲಾರಿ ಹಿಂಬದಿಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ - ಕಾರವಾರದಲ್ಲಿ ರಸ್ತೆ ಅಪಘಾತ ಓರ್ವ ಸಾವು
ಇಂದು ಅಂಕೋಲಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಹುಲಿದೇವರವಾಡದಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರವಾರದಲ್ಲಿ ಲಾರಿ ಹಿಂಬದಿಗೆ ಕಾರು ಡಿಕ್ಕಿ
ಕೇರಳದ ಕಾಸರಗೋಡು ಮೂಲದ ಅಬುಬಕರ್ ಅನ್ಸಾರ್ ರೆಹಮಾನ್(32)ಮೃತ ವ್ಯಕ್ತಿ. ಮಹಮ್ಮದ್ ಇಸಾಕ್ ಖಾದರ್, ಮಹಮ್ಮದ್ ಶರೀಫ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಮಟಾದಿಂದ ಕಾರವಾರ ಕಡೆ ತೆರಳುತ್ತಿದ್ದ ವೇಳೆ ಚಾಲಕನ ಅಜಾಗರುಕತೆಯಿಂದ ಮುಂಬದಿ ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.