ಕರ್ನಾಟಕ

karnataka

ETV Bharat / state

ಬಸ್​- ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು - ರಸ್ತೆ ಅಪಘಾತ

ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾ- ಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರಸಿ ತಾಲೂಕಿನ ಕೊಳಗಿಬೀಸ್​ನಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್​ ನಜ್ಜುಗುಜ್ಜಾಗಿದೆ.

ರಸ್ತೆ ಅಪಘಾತ

By

Published : Sep 29, 2019, 3:11 AM IST

ಶಿರಸಿ: ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಕೊಳಗಿಬೀಸ್​ನಲ್ಲಿ ನಡೆದಿದೆ.

ತಾಲೂಕಿನ ಪಂಚಲಿಂಗದ ಚಂದ್ರಶೇಖರ ತಿಮ್ಮಾನಾಯ್ಕ (55) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ನಿನ್ನೆ ಸಂಜೆ ಶಿರಸಿಗೆ ಬರುತ್ತಿರುವಾಗ ಕೊಳಗಿಬೀಸ್ ಸರ್ಕಲ್​ ಬಳಿ ಬೈಕ್ ನಿಯಂತ್ರಣ ತಪ್ಪಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details