ಕರ್ನಾಟಕ

karnataka

ETV Bharat / state

ಉಪಚುನಾವಣೆ, ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಗೆಲುವು: ಆರ್.ವಿ. ದೇಶಪಾಂಡೆ ವಿಶ್ವಾಸ - ಶಿರಸಿ ಇತ್ತೀಚಿನ ಸುದ್ದಿ

ವಿಧಾನಸಭಾ ಉಪಚುನಾವಣೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಸಾಧಿಸಲಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಶಿರಸಿಯಲ್ಲಿ ಹೇಳಿದರು.

ಮಾಜಿ ಸಚಿವ ಆರ್.ವಿ.ದೇಶಪಾಂಡೆ
ಮಾಜಿ ಸಚಿವ ಆರ್.ವಿ.ದೇಶಪಾಂಡೆ

By

Published : Oct 19, 2020, 4:03 PM IST

ಶಿರಸಿ: ರಾಜ್ಯದಲ್ಲಿ ನಡೆಯುತ್ತಿರುವ ಎರಡು ವಿಧಾನಸಭಾ ಉಪಚುನಾವಣೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ವಿಜಯ ಸಾಧಿಸಲಿದೆ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆಯ ಉಪ ಚುನಾವಣೆಯ ಎರಡು ಕಡೆಗಳಲ್ಲಿ ಉತ್ತಮ ಅಭ್ಯರ್ಥಿಯನ್ನು ಹಾಕಲಾಗಿದೆ. ಕುಸುಮಾ ಹಾಗೂ ಜಯಚಂದ್ರ ಗೆಲ್ಲಲಿದ್ದು, ಎರಡೂ ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿಕೆ

ಅಲ್ಲದೇ ವಿಧಾನಪರಿಷತ್ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಲಿದ್ದು, ಲಗಾಮಿಲ್ಲದೆ ಸಾಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರಕ್ಕೆ ಮೇಲ್ಮನೆಯಲ್ಲಿ ತಡೆಯೊಡ್ಡಲು ಕಾಂಗ್ರೆಸ್ ಅಭ್ಯರ್ಥಿಗಳು ಅನಿವಾರ್ಯವಾಗಿದ್ದಾರೆ. ಅದೇ ರೀತಿ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಆರ್.ಎಂ. ಕುಬೇರಪ್ಪ ಅವರ ಗೆಲುವು‌ ನಿಶ್ಚಿತ ಎಂದರು.‌

ಬಿಜೆಪಿ ಆಡಳಿತದಲ್ಲಿ ಯಾವ ಮಸೂದೆ ಬಗ್ಗೆಯೂ ಚರ್ಚೆಯಿಲ್ಲ, ರೈತ ಸಮಸ್ಯೆಗಳಿಗೆ ಸ್ಪಂದನೆಯಿಲ್ಲ, ಯಾವುದೇ ವಿಷಯಗಳ ಕುರಿತಾಗಿ ಚರ್ಚೆ ಮಾಡದೆ ಮಸೂದೆ ಪಾಸ್ ಮಾಡಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದು ಆರೋಪಿಸಿದರು.

ABOUT THE AUTHOR

...view details