ಶಿರಸಿ (ಉತ್ತರ ಕನ್ನಡ):ಚಾಲಕರ ನಿರ್ಲಕ್ಷ್ಯದಿಂದ ಶುಕ್ರವಾರ ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮತ್ತು ಬನವಾಸಿ ಭಾಗದಲ್ಲಿ ಪ್ರತ್ಯೇಕವಾಗಿ ಶಾಲಾ ವಾಹನಗಳು ಅಪಘಾತಕ್ಕೀಡಾಗಿವೆ. ಓರ್ವ ವೃದ್ಧೆ ಮೃತಪಟ್ಟಿದ್ದಾರೆ.
ಎರಡೂ ಶಾಲೆಯವರು ಪ್ರವಾಸಕ್ಕೆ ಆಗಮಿಸಿದ್ದರು. ರಾಷ್ಟ್ರೀಯ ಹೆದ್ದಾರಿ 63ರ ಯಲ್ಲಾಪುರದ ಅರಬೈಲ್ ಘಟ್ಟದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಟ್ಯಾಂಕರ್‌ಗೆ ಶಾಲಾ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಹೀಗಾಗಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಸುಮಾರು 15 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಉತ್ತರಕನ್ನಡದಲ್ಲಿ ಎರಡು ಪ್ರತ್ಯೇಕ ಶಾಲಾ ವಾಹನ ಅಪಘಾತ ಚಾಲಕನಿಗೆ ಗಂಭೀರ ಗಾಯ: ಹುಬ್ಬಳ್ಳಿಯ ಸೈಂಟ್ ಅಂಥೋನಿ ಪಬ್ಲಿಕ್ ಶಾಲೆಯವರು ಹುಬ್ಬಳ್ಳಿಯಿಂದ ಅಂಕೋಲಾ ಮಾರ್ಗವಾಗಿ ಸುಂಕಸಾಳದತ್ತ ಪ್ರವಾಸಕ್ಕೆ ತೆರಳುತ್ತಿದ್ದಾಗ ಅಪಘಾತ ಉಂಟಾಗಿದೆ. ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಶಿರಸಿಯ ಬನವಾಸಿ ಸಮೀಪದ ರಾಷ್ಟ್ರೀಯ ಹೆದ್ದಾರಿ 766ಇ ದಲ್ಲಿ ಬುಗಡಿಕೊಪ್ಪದ ಬಳಿ ರಾಣಿಬೆನ್ನೂರಿನಿಂದ ಶಿರಸಿಗೆ ಬರುತ್ತಿದ್ದ ಖಾಸಗಿ ವಿದ್ಯಾ ಸಂಸ್ಥೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಶಾಲೆಯ ಸಿಬ್ಬಂದಿ ಕಸ್ತೂರಮ್ಮ (60) ಮೃತಪಟ್ಟಿದ್ದಾಳೆ.
ಇದನ್ನೂ ಓದಿ:ಹುಬ್ಬಳ್ಳಿ: ತಿರುಪತಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನಲ್ಲಿ ವ್ಯಕ್ತಿ ಹತ್ಯೆ