ಕಾರವಾರ:ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಕಾರ್ಮಿಕರ ಮೇಲೆ ಗುತ್ತಿಗೆ ಪಡೆದ ಕಂಪನಿಗಳು ನಿರಂತರ ದಬ್ಬಾಳಿಕೆ ನಡೆಸುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಶ್ರೀ ಮಹಾದೇವ ಸ್ಥಳೀಯ ಹಾಗೂ ಸೀಬರ್ಡ್ ನಿರಾಶ್ರಿತರ ಕೂಲಿ ಕಾರ್ಮಿಕರ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಗುತ್ತಿಗೆ ಕಾರ್ಮಿಕರ ಮೇಲೆ ದಬ್ಬಾಳಿಕೆ ಆರೋಪ: ಕ್ರಮ ಕೈಗೊಳ್ಳುವಂತೆ ಮನವಿ - seabird-contract-workers-ask-to-solve-their-problems
ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಪಡೆದಿರುವ ಶಾಪೂರ್ಜಿ ಪಾಲನಜೀ ಕಂಪನಿಯು ಇಲ್ಲಿನ ಗುತ್ತಿಗೆ ಕಾರ್ಮಿಕರಿಗೆ ಸರಿಯಾಗಿ ಸಂಬಳ ನೀಡುತ್ತಿಲ್ಲ. ಗುತ್ತಿಗೆ ಕಾರ್ಮಿಕರ ಮೇಲೆ ಗುತ್ತಿಗೆ ಪಡೆದ ಕಂಪನಿಗಳು ನಿರಂತರ ದಬ್ಬಾಳಿಕೆ ನಡೆಸುತ್ತಿದೆ. ಹೀಗಾಗಿ ಕೂಡಲೇ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದೆ.
ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಪಡೆದಿರುವ ಶಾಪೂರ್ಜಿ ಪಾಲನಜೀ ಕಂಪನಿಯು ಇಲ್ಲಿನ ಗುತ್ತಿಗೆ ಕಾರ್ಮಿಕರಿಗೆ ಸರಿಯಾಗಿ ಸಂಬಳ ನೀಡುತ್ತಿಲ್ಲ. ಪಿಎಫ್, ಇಎಸ್ಐ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸುತ್ತಿಲ್ಲ. ಜತೆಗೆ ಕಾರಣ ನೀಡದೆ ಸ್ಥಳೀಯ ಗುತ್ತಿಗೆ ಕಾರ್ಮಿಕರನ್ನು ತೆಗೆದು ಹಾಕುತ್ತಿದ್ದು, ಹೊರ ರಾಜ್ಯದವರನ್ನು ಕೆಲಸಕ್ಕೆ ನೇಮಿಸಿಕೊಳ್ಳಲಾಗುತ್ತಿದೆ. ಇದರಿಂದ ಸೀಬರ್ಡ್ ನೌಕಾನೆಲೆಗಾಗಿ ಸರ್ವಸ್ವವನ್ನೂ ಕಳೆದುಕೊಂಡವರಿಗೆ ಅವಕಾಶಗಳು ವಂಚಿತವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಕಂಪನಿಗೆ ಅವಶ್ಯವಿರುವ ಸಾಮಗ್ರಿಗಳನ್ನು ಸ್ಥಳೀಯ ಗುತ್ತಿಗೆ ಕಾರ್ಮಿಕರು ಪೂರೈಕೆ ಮಾಡುತ್ತಿದ್ದರು. ಆದರೆ ಇದೀಗ ಅವರಿಂದ ಕಂಪನಿಯವರು ನಿಲ್ಲಿಸಿ ಹೊರ ಹುಬ್ಬಳ್ಳಿ ಧಾರವಾಡದವರಿಂದ ಪಡೆಯುತ್ತಿದ್ದಾರೆ. ಇದರಿಂದ ಸ್ಥಳೀಯರಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಂಪನಿಯ ಗೇಟ್ ಮುಂಭಾಗ ಉಗ್ರ ಪ್ರತಿಭಟನೆ ನಡೆಸುವುದಾಗಿ ಸಂಘದ ಪದಾಧಿಕಾರಿಗಳು ಎಚ್ಚರಿಸಿದ್ದಾರೆ. ಬಳಿಕ ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ.