ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿ ಏಳು ಜನರು ಗಾಯಗೊಂಡಿರುವ ಘಟನೆ ದಾಂಡೇಲಿ ತಾಲ್ಲೂಕಿನ ಅಂಜಗಾಂವ್ ಬಳಿ ಇಂದು ನಡೆದಿದೆ.
ದಾಂಡೇಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 7 ಪ್ರಯಾಣಿಕರಿಗೆ ಗಾಯ - latest news of karavara
ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದ್ದು, ಏಳು ಜನರು ಗಾಯಗೊಂಡಿರುವ ಘಟನೆ ದಾಂಡೇಲಿ ತಾಲೂಕಿನ ಅಂಜಗಾಂವ್ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : ಏಳು ಪ್ರಯಾಣಿಕರಿಗೆ ಗಾಯ
ವಿಜಯಪುರದಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಮೇಲೆಯೇ ಪಲ್ಟಿಯಾಗಿದೆ. ಘಟನೆಯಲ್ಲಿ ಏಳು ಪ್ರಯಾಣಿಕರಿಗೆ ಗಾಯವಾಗಿದ್ದು, ತಕ್ಷಣ ಅವರನ್ನು ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.