ಕಾರವಾರ:ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಜಿಲ್ಲಾ ಸತ್ರ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಪಟ್ಟಣದ ವನ್ನಳ್ಳಿಯ ಅನ್ಸಾರಿ ಖಾಸಿಂ ಜಿಂಗ್ರೊ ಎಂಬಾತ ಶಿಕ್ಷೆಗೆ ಒಳಗಾಗಿದ್ದಾನೆ.
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ - ETv Bharat kannada news
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ 1 ಲಕ್ಷ ರೂ. ದಂಡ ಮತ್ತು 20 ವರ್ಷ ಕಠಿಣ ಶಿಕ್ಷೆಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ.
ಈತ 2022 ರ ಮಾ.15 ರಂದು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ 6 ವರ್ಷದ ಬಾಲಕನನ್ನು ಚಾಕೊಲೆಟ್ ನೀಡುವುದಾಗಿ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಸಂಬಂಧ ನೊಂದ ಬಾಲಕನ ಪೋಷಕರು ಮಾ.16 ರಂದು ಆರೋಪಿ ವಿರುದ್ದ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
ಇದನ್ನೂ ಓದಿ:ಬಾಲಾಪರಾಧಿ ಗೃಹದಲ್ಲಿ ದುಷ್ಕೃತ್ಯ: ಇಬ್ಬರು ಹುಡುಗರ ಮೇಲೆ ಲೈಂಗಿಕ ದೌರ್ಜನ್ಯ