ಕರ್ನಾಟಕ

karnataka

ETV Bharat / state

ಬಾಲಕಿ ಜೊತೆ ಲವ್ವಿ-ಡವ್ವಿ... ಗರ್ಭಿಣಿಯಾಗುತ್ತಿದ್ದಂತೆ ಕಾಲ್ಕಿತ್ತ ಯುವಕ! - ಭಟ್ಕಳದಲ್ಲಿ ಅಪ್ರಾಪ್ತೆ ಯುವತಿಯೊಂದಿಗೆ ಲೈಂಗಿಕ ದೌರ್ಜನ್ಯ

ಉತ್ತರ ಪ್ರದೇಶದ ಮೂಲದ ಸಾಹಿಲ್ ಎಂಬಾತ ಅಪ್ರಾಪ್ತೆ ಯುವತಿಯೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿ ಗರ್ಭೀಣಿಯಾದ ವಿಷಯ ತಿಳಿಯುತ್ತಿದ್ದಂತೆ ಪರಾರಿಯಾದ ಘಟನೆ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ.

sexual-harassment-with-a-young-woman-in-bhatkala
ಅಪ್ರಾಪ್ತೆ ಯುವತಿಯೊಂದಿಗೆ ಲೈಂಗಿಕ ದೌರ್ಜನ್ಯ

By

Published : Nov 28, 2019, 4:36 AM IST

ಭಟ್ಕಳ:ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಗರ್ಭಿಣಿಯಾಗಿಸಿದ ಘಟನೆ ಬುಧವಾರದಂದು ಭಟ್ಕಳ ತಾಲೂಕಿನ ಹನೀಪಾಬಾದ್​ನಲ್ಲಿ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಮೂಲದ ಸಾಹಿಲ್ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿ ಎನ್ನಲಾಗ್ತಿದೆ.ಬಾಲಕಿಯ ಮನೆಯ ಬಳಿ ಕೆಲಸಕ್ಕೆಂದು ತೆರಳಿ, ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ಆತ ನಾಪತ್ತೆಯಾಗಿದ್ದಾನೆ. ಬಾಲಕಿ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರ ಬಳಿ ಚಿಕಿತ್ಸೆಗೆಂದು ತೆರಳಿದಾಗ ಬಾಲಕಿ 7 ತಿಂಗಳ ಗರ್ಭಿಣಿಯಾಗಿರುವ ವಿಷಯ ಮನೆಯವರಿಗೆ ತಿಳಿದಿದೆ.

ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

...view details