ಶಿರಸಿ:ಉತ್ತರ ಕನ್ನಡ ಜಿಲ್ಲೆಯ ಹೈ ಫ್ಲೋ ನೇಸಲ್ ಆಕ್ಸಿಜನ್ ವ್ಯವಸ್ಥೆ ಇರುವ ಮೊದಲ ಕೋವಿಡ್ ಚಿಕಿತ್ಸಾ ಕೊಠಡಿಗೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಚಾಲನೆ ನೀಡಿದರು.
ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೈ ಫ್ಲೋ ನೇಸಲ್ ಆಕ್ಸಿಜನ್ ವ್ಯವಸ್ಥೆ ಆರಂಭ - Pandit Public Hospital
ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೈ ಫ್ಲೋ ನೇಸಲ್ ಆಕ್ಸಿಜನ್ ವ್ಯವಸ್ಥೆ ಇರುವ ಕೊಠಡಿ ತೆರೆಯಲಾಗಿದ್ದು, ಇದನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು.

ಹೈ ಫ್ಲೋ ನೇಸಲ್ ಆಕ್ಸಿಜನ್ ವ್ಯವಸ್ಥೆ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರಂಭ
ಕೊರೊನಾ ಸೋಂಕಿತ ವ್ಯಕ್ತಿಗೆ ತೀವ್ರ ಉಸಿರಾಟದ ಸಮಸ್ಯೆ ಇದ್ದಾಗ ಹೈ ಫ್ಲೋ ನೇಸಲ್ ಬಳಸಬೇಕು. ಶ್ವಾಸನಾಳಕ್ಕೆ ಆಕ್ಸಿಜನ್ ಪೈಪ್ ಅಳವಡಿಸುವ ಕಾರ್ಯ ಈ ಸಮಯದಲ್ಲಿ ಆಗಬೇಕು. ಈ ಹಿನ್ನೆಲೆಯಲ್ಲಿ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಈ ವ್ಯವಸ್ಥೆ ಇರುವ ಕೊಠಡಿ ತೆರೆಯಲಾಗಿದೆ ಎಂದು ಸ್ಪೀಕರ್ ತಿಳಿಸಿದರು.
ಇದರ ಜೊತೆಗೆ 25 ಹಾಸಿಗೆಗಳುಳ್ಳ ಪ್ರತ್ಯೇಕ ಕೊರೊನಾ ವಾರ್ಡ್ ತೆರೆಯಲಾಗಿದ್ದು, ಇಲ್ಲಿ ಕೋವಿಡ್- 19 ರೋಗ ಲಕ್ಷಣ ಉಳ್ಳವರನ್ನು ದಾಖಲಿಸಿಕೊಳ್ಳಲಾಗುತ್ತದೆ. ಇದಕ್ಕಾಗಿಯೇ ಪ್ರತೀ ಹಾಸಿಗೆಗೂ ಆಕ್ಸಿಜನ್ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ರು.