ಶಿರಸಿ:ರಾಜ್ಯದಲ್ಲೇ ಪ್ರಸಿದ್ಧಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ದೇವಿಯ ಉತ್ಸವ ಇಂದು ಅತ್ಯಂತ ವಿಜೃಂಭಣೆಯಿಂದ ಆರಂಭವಾಯಿತು.
ಶಿರಸಿ ಮಾರಿಕಾಂಬಾ ಜಾತ್ರೆ ಆರಂಭ: ರಾಜ್ಯದ ವಿವಿಧೆಡೆಯಿಂದ ಬಂದ ಭಕ್ತಗಣ - ಮಾರಿಕಾಂಬಾ ದೇವಿಯ ಜಾತ್ರೆ ಶಿರಸಿ
ರಾಜ್ಯದಲ್ಲೇ ಪ್ರಸಿದ್ಧಿ ಪಡೆದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ದೇವಿಯ ಉತ್ಸವ ಇಂದು ಅತ್ಯಂತ ವಿಜೃಂಭಣೆಯಿಂದ ಆರಂಭವಾಯಿತು.
ಸರ್ವಾಭಿಷ್ಟವನ್ನೂ ಸಿದ್ಧಿಸುತ್ತಾಳೆಂಬ ನಂಬಿಕೆಯಿಂದ ಕರ್ನಾಟಕದ ಎಲ್ಲೆಡೆ ಮಾತ್ರವಲ್ಲದೆ, ನೆರೆಯ ಮಹಾರಾಷ್ಟ್ರ, ಆಂಧ್ರ, ಕೇರಳದಿಂದಲೂ ಭಕ್ತಾದಿಗಳು ಆಗಮಿಸಿ ಜಾತ್ರೆಯಲ್ಲಿ ಭಾಗವಹಿಸಿದರು. ಮಂಗಳವಾರದಂದು ದೇವಿಯ ಕಲ್ಯಾಣ ಮಹೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಇಂದು ದೇವಿಯ ರಥಾರೋಹಣ ನೆರವೇರಿಸಿ ನಗರದ ಬೀದಿ,ಬೀದಿಗಳಲ್ಲಿ ಮೆರವಣಿಗೆ ಮೂಲಕ ನಗರದ ಹೃದಯ ಭಾಗದಲ್ಲಿರೋ ಬಿಡುಕಿ ಬೈಲಿನ ಗದ್ದುಗೆಗೆ ತರಲಾಯಿತು.
ಪ್ರತೀ ಎರಡು ವರ್ಷಕ್ಕೊಮ್ಮೆ ಸರ್ವತ ಸುಭೀಕ್ಷಾರ್ಥವಾಗಿ ಧಾರ್ಮಿಕ ಪರಂಪರೆಯಂತೆ ಪೂಜಾ ಉತ್ಸವಗಳೊಂದಿಗೆ ಶ್ರೀ ಮಾರಿಕಾಂಬಾ ಜಾತ್ರೆಯನ್ನು ಅದ್ದೂರಿಯಿಂದ ನಡೆಸಲಾಗುತ್ತದೆ. ಜಾತ್ರೆಗೆ ದೇಶದ ಮೂಲೆ ಮೂಲೆಗಳಿಂದ ಭಕ್ತಾಧಿಗಳು ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾದರು.