ಕರ್ನಾಟಕ

karnataka

ETV Bharat / state

ಶಿರಸಿ ಮಾರಿಕಾಂಬಾ ಜಾತ್ರೆ ದಿನಾಂಕ ಘೋಷಣೆ.. - shirasi marikamba fair latest news

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ‌ದೇವಿಯ ಜಾತ್ರಾ ಮಹೋತ್ಸವ 2020ರ ಮಾರ್ಚ್ 3 ರಿಂದ 11ರವರೆಗೆ ಜರುಗಲಿದೆ.

Shirasi Marikamba Fair Date was Announced
ಶಿರಸಿ ಮಾರಿಕಾಂಬಾ ಜಾತ್ರೆ ದಿನಾಂಕ ಘೋಷಣೆ

By

Published : Dec 29, 2019, 10:04 PM IST

ಶಿರಸಿ :ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆ ಉತ್ತರಕನ್ನಡ ಜಿಲ್ಲೆಯ ಶಿರಸಿ ಶ್ರೀ ಮಾರಿಕಾಂಬಾ ‌ದೇವಿಯ ಜಾತ್ರಾ ಮಹೋತ್ಸವ 2020ರ ಮಾರ್ಚ್ 3ರಿಂದ 11ರವರೆಗೆ ಜರುಗಲಿದೆ.

ವಿಕಾರಿನಾಮ ಸಂವತ್ಸರದ ಫಾಲ್ಗುಣ ಶುಕ್ಲ ಅಷ್ಟಮಿಯಂದು ಜಾತ್ರೆ ಆರಂಭವಾಗಲಿದೆ. ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದ ಪೂರ್ವ ವಿಧಿ-ವಿಧಾನಗಳು ಜ.22ರಿಂದ ಪ್ರಾರಂಭವಾಗಲಿವೆ ಎಂದು ಇಂದು ದೇವಾಲಯದಲ್ಲಿ ನಡೆದ ಜಾತ್ರಾ ಮುಹೂರ್ತ ನಿಗಧಿ ಸಭೆಯಲ್ಲಿ ಅರ್ಚಕ ಶರಣ ಆಚಾರ್ಯ ಜಾತ್ರೆಯ ದಿನಾಂಕ ಘೋಷಣೆ ಮಾಡಿದರು.

ಶಿರಸಿ ಮಾರಿಕಾಂಬಾ ಜಾತ್ರೆ ದಿನಾಂಕ ಘೋಷಣೆ..

ಜ.22ರಂದು ದೇವಿಯ ಪ್ರತಿಷ್ಠಾ ಮಂಟಪ ಕಳಚುವುದು, ಫೆ.11ರಂದು ಪೂರ್ವದಿಕ್ಕಿಗೆ ಮೊದಲ ಹೊರಬೀಡು, ಫೆ.14ರಂದು ಉತ್ತರ ದಿಕ್ಕಿಗೆ 2ನೇ ಹೊರಬೀಡು, ಫೆ.18ರಂದು ಪೂರ್ವ ದಿಕ್ಕಿಗೆ 3ನೇ ಹೊರಬೀಡು, ಫೆ.21ರಂದು ರಥ ಕಟ್ಟಲು ಮರ ಕಡಿಯಲು ಹೋಗುವುದು, ಅದೇ ದಿನ ಉತ್ತರ ದಿಕ್ಕಿಗೆ 4ನೇ ಹೊರಬೀಡು, ಫೆ.25 ರಥದ ಮರ ತರುವುದು, ಅದೇ ದಿನ ರಾತ್ರಿ ಪೂರ್ವದಿಕ್ಕಿಗೆ ಅಂಕೆಯ ಹೊರಬೀಡು, ಫೆ.26ರಂದು ಅಂಕೆ ಹಾಕುವುದು, ದೇವಿಯ ವಿಸರ್ಜನೆ ನಡೆಯಲಿದೆ.

ಮಾ.3ರಂದು ಮಧ್ಯಾಹ್ನ 12.43ಗಂಟೆಯಿಂದ ದೇವಿಯ ರಥದ ಕಲಶದ ಪ್ರತಿಷ್ಠೆ ಹಾಗೂ ರಾತ್ರಿ 11.11ರಿಂದ ಸಭಾ ಮಂಟಪದಲ್ಲಿ ದೇವಿಯ ಜಾತ್ರಾ ಕಲ್ಯಾಣ ಪ್ರತಿಷ್ಠೆ ನಡೆಯಲಿದೆ. ಮಾ.4ರಂದು ಬೆಳಗ್ಗೆ 7.05 ಗಂಟೆಯಿಂದ ದೇವಿಯ ರಥಾರೋಹಣ ಕಾರ್ಯ ನಡೆಯಲಿದ್ದು, ನಂತರ 12.43 ಗಂಟೆಯೊಳಗೆ ದೇವಿಯ ಶೋಭಾ ಯಾತ್ರೆ ಹಾಗೂ ಗದ್ದುಗೆಯ ಮೇಲೆ ಸ್ಥಾಪನೆ ಕಾರ್ಯ ಜರುಗುವುದು. ಮಾ.5ರಿಂದ ಭಕ್ತಾದಿಗಳ ಸೇವೆಗೆ ಅವಕಾಶವಿದೆ. ಮಾ.11ರಂದು ಬೆಳಗ್ಗೆ 10.30 ಗಂಟೆಗೆ ಜಾತ್ರೆ ಮುಕ್ತಾಯವಾಗಲಿದೆ. ಮಾ.25 ಯುಗಾದಿಯಂದು ದೇವಿಯ ಪುನರ್ ಪ್ರತಿಷ್ಠೆ ನಡೆಯಲಿದೆ.

ಜಾತ್ರಾ ಮುಹೂರ್ತ ನಿಗದಿ ಆಗುತ್ತಿದ್ದಂತೆ ಸಂಪ್ರದಾಯದ ಪ್ರಕಾರ ನಾಡಿನ ಮನೆತನದ ಪ್ರಮುಖ ಅಜಯ್ ನಾಡಿಗ್ ದೇವಿ ಸಾನಿಧ್ಯದಲ್ಲಿ ದೀಪ ಬೆಳಗಿಸಿದರು. ನಂತರ ಸಭಿಕರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಯಿತು.

ABOUT THE AUTHOR

...view details