ಶಿರಸಿ:ವಿಧಾನಸಭೆ ಉಪ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಮತಬೇಟೆಗೆ ಇಳಿದಿದ್ದಾರೆ. ಇತ್ತ ಯಲ್ಲಾಪುರ ಕ್ಷೇತ್ರದಲ್ಲಿಯೂ ಬಹಿರಂಗ ಪ್ರಚಾರ ಭರ್ಜರಿಯಾಗಿ ಸಾಗಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ. ಬನವಾಸಿ ಭಾಗದ 10ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಸ್ಥಳೀಯ ನಾಯಕರ ಸಮ್ಮುಖದಲ್ಲಿ ಪ್ರಚಾರ ನಡೆಸಿದ್ದಾರೆ.
ರಂಗೇರಿದ ಉಪ ಸಮರ... ಶಿವರಾಮ್ ಹೆಬ್ಬಾರ್ ಭರ್ಜರಿ ಪ್ರಚಾರ - ಯಲ್ಲಾಪುರ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಹೇಳಿಕೆ
ಯಲ್ಲಾಪುರ ಕ್ಷೇತ್ರದಲ್ಲಿ ಬಹಿರಂಗ ಪ್ರಚಾರ ಭರ್ಜರಿಯಾಗಿ ಸಾಗಿದ್ದು, ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.
ಶಿವರಾಮ್ ಹೆಬ್ಬಾರ್ ಭರ್ಜರಿ ಪ್ರಚಾರ
ಈ ಸಂದರ್ಭದಲ್ಲಿ ಮಾತನಾಡಿದ ಹೆಬ್ಬಾರ್, ಬನವಾಸಿ ಭಾಗದಲ್ಲಿ ಸಂಪೂರ್ಣ ನೀರಾವರಿ ಯೋಜನೆ ಮಾಡುವುದು ನನ್ನ ಗುರಿಯಾಗಿದೆ. ಅದಕ್ಕಾಗಿ ನಿಮ್ಮ ಆಶೀರ್ವಾದದ ಅಗತ್ಯವಿದ್ದು, ನನ್ನನ್ನು ಗೆಲ್ಲಿಸಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.