ಶಿರಸಿ: ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆ ಯಲ್ಲಾಪುರದ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಸಭೆ ನಡೆಸಿ, ಚುನಾವಣೆಯಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.
ಯಲ್ಲಾಪುರ ಉಪ ಚುನಾವಣೆ ಸಮರ: ಬಿಜೆಪಿ ಟಿಕೆಟ್ ಆಕಾಂಕ್ಷಿಗಳೊಂದಿಗೆ ಹೆಬ್ಬಾರ್ ಸಭೆ - ಶಿರಸಿ ಸುದ್ದಿ
ಉಪ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಯಲ್ಲಾಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಿಟ್ಟಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆ ಕ್ಷೇತ್ರದ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಸಭೆ ನಡೆಸಿ, ಚುನಾವಣೆಯಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.
ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಜೊತೆ ಶಿವರಾಮ್ ಹೆಬ್ಬಾರ್ ಸಭೆ
ಯಲ್ಲಾಪುರ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆ, ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾದ ವಿ.ಎಸ್. ಪಾಟೀಲ್, ಎಲ್.ಟಿ. ಪಾಟೀಲ್ ಜೊತೆ ಸಭೆ ನಡೆಸಿ, ಎಲ್ಲರೂ ಅಭಿವೃದ್ಧಿಗೆ ಸಹಕರಿಸುವಂತೆ ಕೋರಿದರು.
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಭಾಗವಾದ ಮುಂಡಗೋಡದಲ್ಲಿ ಪಾಟೀಲ್ ಬೆಂಬಲಿಗರ ಜೊತೆಗೂ ಹೆಬ್ಬಾರ್ ಮಾತುಕತೆ ನಡೆಸಿದ್ದಲ್ಲದೆ, ಟಿಕೆಟ್ ಆಕಾಂಕ್ಷಿಗಳ ಮನವೊಲಿಸಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ರು.