ಕಾರವಾರ :ಕಾರ್ಮಿಕ ಹಾಗೂ ವಾರ್ತಾ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ವರ್ಗಾವಣೆ ಸರ್ಕಾರ ಆಡಳಿತಾತ್ಮಕವಾಗಿ ತೆಗೆದುಕೊಂಡ ನಿರ್ಧಾರ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.
ಪಿ ಮಣಿವಣ್ಣನ್ ವರ್ಗಾವಣೆ ಪರೋಕ್ಷವಾಗಿ ಸಮರ್ಥಿಸಿಕೊಂಡ ಸಚಿವ ಶಿವರಾಮ್ ಹೆಬ್ಬಾರ್.. - ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್
ಕಾರ್ಮಿಕ ಇಲಾಖೆ ಕಾರ್ಮಿಕರು ಮತ್ತು ಮಾಲೀಕರ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕು. ಕೇವಲ ಇಂದಿನ ಸಮಸ್ಯೆ ಪರಿಹಾರಕ್ಕೆ ಕಾರ್ಮಿಕರ ಹಿತವನ್ನಷ್ಟೇ ನೋಡುವುದು ಸರಿಯಾದ ಕ್ರಮವಲ್ಲ.
ಕಾರವಾರದ ಜಿಲ್ಲಾ ಪತ್ರಿಕಾಭವನದಲ್ಲಿ ಮಾತನಾಡಿದ ಅವರು, ತಾಂತ್ರಿಕತೆಯ ಬಳಕೆಯಲ್ಲಿ ಒಂದು ನಿಯಂತ್ರಣ ಇರಬೇಕು. ಆದರೆ, ಇದು ಅತಿಯಾದಾಗ ಸರ್ಕಾರ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಮಣಿವಣ್ಣನವರ್ ವಿಷಯದಲ್ಲಿ ಹೀಗೆ ಆಗಿರಬಹುದು ಎಂದು ಹೇಳಿದರು.
ಕಾರ್ಮಿಕ ಇಲಾಖೆ ಕಾರ್ಮಿಕರು ಮತ್ತು ಮಾಲೀಕರ ನಡುವೆ ಸೇತುವೆಯಾಗಿ ಕೆಲಸ ಮಾಡಬೇಕು. ಕೇವಲ ಇಂದಿನ ಸಮಸ್ಯೆ ಪರಿಹಾರಕ್ಕೆ ಕಾರ್ಮಿಕರ ಹಿತವನ್ನಷ್ಟೇ ನೋಡುವುದು ಸರಿಯಾದ ಕ್ರಮವಲ್ಲ. ನನ್ನ ವ್ಯಾಪ್ತಿಯಲ್ಲಿ ಅಂತಹ ನಿರ್ಧಾರವನ್ನು ತೆಗೆದುಕೊಳ್ಳಬಹುದು. ಆದರೆ, ನಾಳೆ ಕಾರ್ಮಿಕರ ಭವಿಷ್ಯ ಏನು ಎಂಬುದನ್ನು ನೋಡಬೇಕು. ಹೀಗಾಗಿ ಸರ್ಕಾರ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕಾಗಿದೆ ಎಂದು ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.