ಶಿರಸಿ : ಪಟ್ಟಣದ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕಾರ್ಯ ನಿರ್ವಹಿಸುತ್ತಿದ್ದ 61ವರ್ಷ ವಯಸ್ಸಿನ ವೈದ್ಯರೊಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ.
ಕೋವಿಡ್-19 ಅಟ್ಟಹಾಸ: ನಿವೃತ್ತಿ ನಂತರವೂ ಸೇವೆ ಮುಂದುವರಿಸಿದ್ದ ಶಿರಸಿಯ ವೈದ್ಯ ಬಲಿ - Sirsi Doctor died from Corona
ಶಿರಸಿಯ ಖ್ಯಾತ ವೈದ್ಯರೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೊರೊನಾಗೆ ಶಿರಸಿಯ ವೈದ್ಯ ಬಲಿ
ಮೂಲತಃ ದಾವಣಗೆರೆಯವರಾದ ಇವರು, ತಮ್ಮ ಸೇವಾ ನಿವೃತ್ತಿಯ ನಂತರವೂ ಶಿರಸಿಯ ಸರ್ಕಾರಿ ಆಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿ ಕೆಲವು ತಿಂಗಳುಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ಆ. 25 ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ, ಚಿಕಿತ್ಸೆಗಾಗಿ ದಾವಣಗೆರೆಗೆ ತೆರಳಿದ್ದರು. ಕಳೆದೆರಡು ದಿನಗಳಿಂದ ವೆಂಟಿಲೇಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ ವೈದ್ಯ ಕೊನೆಯುಸಿರೆಳೆದಿದ್ದಾರೆ.