ಕರ್ನಾಟಕ

karnataka

ETV Bharat / state

ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ಭರದ ಸಿದ್ಧತೆ - ಶಿರಸಿ ಮಾರಿಕಾಂಬಾ ದೇವಾಲಯ

ಜಾಗೃತ ಶಕ್ತಿಪೀಠಗಳಲ್ಲಿ ಒಂದಾದ ಶಿರಸಿ ಮಾರಿಕಾಂಬಾ ದೇವಿಯ ಜಾತ್ರೆಗೆ ಪೂರ್ವ ಸಿದ್ಧತೆಗಳು ಭರದಿಂದ ಸಾಗಿವೆ.

sirsi marikamba devi mahosthav preperations
ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ಸಿದ್ಧತೆ

By

Published : Feb 26, 2020, 11:28 AM IST

ಶಿರಸಿ/ಉತ್ತರ ಕನ್ನಡ: ಜಾಗೃತ ಶಕ್ತಿ ಪೀಠಗಳಲ್ಲಿ ಒಂದಾದ ಶಿರಸಿ ಮಾರಿಕಾಂಬಾ ದೇವಿಯ ಜಾತ್ರೆಗೆ ಪೂರ್ವ ಸಿದ್ಧತೆಗಳು ಭರದಿಂದ ಸಾಗಿವೆ.

ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ಸಿದ್ಧತೆ

ಜಾತ್ರೆ ಸಂದರ್ಭದಲ್ಲಿ ನವದಿನಗಳ ಕಾಲ ದೇವಿ ವಿರಾಜಮಾನವಾಗುವ ಗದ್ದುಗೆ ಮಂಟಪದ ತಯಾರಿ ಆರಂಭವಾಗಿದ್ದು, ಪುರಾತನ ಶೈಲಿಯ ಶಿಲಾ ಮಂಟಪದ ಮಾದರಿಯಲ್ಲಿ ಜಾತ್ರೆಯ ಮಂಟಪ ಇರಲಿದೆ. ಮಾರ್ಚ್ 3ರಿಂದ 11ರವರೆಗೆ ದೇವಿ ಜಾತ್ರೆ ನಡೆಯಲಿದ್ದು, ದೇವಾಲಯದ ವತಿಯಿಂದ ಜಾತ್ರಾ ಗದ್ದುಗೆಗೆ ಬಣ್ಣ ಬಳಿಯುವ ಕಾರ್ಯ ನಡೆದಿದೆ.

ಜಾತ್ರೆ ಆರಂಭದಿಂದ ಮುಕ್ತಾಯದವರೆಗೆ ಮಾರಿಕಾಂಬೆ ವಿರಾಜಮಾನವಾಗಿ ಭಕ್ತರಿಗೆ ದರ್ಶನ ನೀಡುವ ಬಿಡಕಿ ಬೈಲಿನಲ್ಲಿರುವ ಜಾತ್ರಾ ಗದ್ದುಗೆಯೂ ಜನಾಕರ್ಷಣೆಯ ಕೇಂದ್ರವಾಗಿದ್ದು, ಅದನ್ನು ಸುಂದರಗೊಳಿಸುವ ಕೆಲಸ ನಡೆಯುತ್ತಿದೆ. ಗದ್ದುಗೆ ಮತ್ತು ಮುಖ ಮಂಟಪದ ಕೆಲಸಗಳು ಶೇ.50ರಷ್ಟು ಸಂಪನ್ನಗೊಂಡಿದೆ. ಮಾ.3 ರಂದು ದೇವಿಯ ಕಲ್ಯಾಣೋತ್ಸವ ನಡೆಯಲಿದ್ದು, ಮಾ.4 ರಂದು ರಥೋತ್ಸವದ ಮೂಲಕ ದೇವಿ ಗದ್ದುಗೆಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆ ಸಕಲ ಕಾರ್ಯಗಳೂ ಸಮರೋಪಾದಿಯಲ್ಲಿ ನಡೆಯುತ್ತಿದೆ. ಇಡೀ ಶಿರಸಿಯೇ ಜಾತ್ರೆಯ ರಂಗಿನಿಂದ ಕಂಗೊಳಿಸುತ್ತಿದ್ದು, ಅಗತ್ಯ ಸಿದ್ಧತೆಗಳು ಭರದಿಂದ ಸಾಗಿದೆ. ದೇವಿಯನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾಯುತ್ತಿದ್ದಾರೆ.

ABOUT THE AUTHOR

...view details