ಕರ್ನಾಟಕ

karnataka

ETV Bharat / state

ಹೆಬ್ಬಾರ್​​ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ... ಕೈ ಬಿಟ್ಟು ಕಮಲ ಮುಡಿದ ತಾಪಂ ಅಧ್ಯಕ್ಷರು

ಶಿವರಾಮ ‌ಹೆಬ್ಬಾರ್ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾದ ಮೇಲೆ ಯಲ್ಲಾಪುರ ಕ್ಷೇತ್ರದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ಬೆಂಬಲದಿಂದ ಆಯ್ಕೆಯಾಗಿದ್ದ ಯಲ್ಲಾಪುರ ಮತ್ತು ಮುಂಡಗೋಡ ತಾಲೂಕು ಪಂಚಾಯತ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ‌

kn_srs_04_rajiname_parva_photo_ka10005
ಹೆಬ್ಬಾರ್ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ,ಕೈ ಬಿಟ್ಟು ಕಮಲ ಮುಡಿದ ತಾಲೂಕ್ ಪಂಚಾಯತ್ ಅಧ್ಯಕ್ಷರು

By

Published : Jan 11, 2020, 7:37 AM IST

ಶಿರಸಿ:ಶಿವರಾಮ ‌ಹೆಬ್ಬಾರ್ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾದ ಮೇಲೆ ಯಲ್ಲಾಪುರ ಕ್ಷೇತ್ರದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್ ಬೆಂಬಲದಿಂದ ಆಯ್ಕೆಯಾಗಿದ್ದ ಯಲ್ಲಾಪುರ ಮತ್ತು ಮುಂಡಗೋಡ ತಾಲೂಕು ಪಂಚಾಯತ್ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ‌

ಈ ಹಿಂದೆ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಹೆಬ್ಬಾರ್ ತಮ್ಮ ಪ್ರಭಾವ ಬಳಸಿ ಮುಂಡಗೋಡ ಮತ್ತು ಯಲ್ಲಾಪುರ ತಾಲೂಕು ಪಂಚಾಯತ್​ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ಮಾಡಿದ್ದರು. ಆದರೆ ಅವರು ಈಗ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಎರಡೂ ಕಡೆ ಕಾಂಗ್ರೆಸ್ ಬೆಂಬಲಿಗರು ರಾಜೀನಾಮೆ ಸಲ್ಲಿಸಿದ್ದಾರೆ. ‌ಯಲ್ಲಾಪುರ ತಾಲೂಕು ಪಂಚಾಯತ್​​ನಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಹೊಂದಿದ್ದರೂ ಕಾಂಗ್ರೆಸ್ ಬೆಂಬಲದಿಂದ ಬಿಜೆಪಿಯ ರೆಬೆಲ್ ಆಗಿ ಭವ್ಯಾ ಶೆಟ್ಟಿ ಅಧ್ಯಕ್ಷರಾಗಿದ್ದರು. ಇನ್ನು ಮುಂಡಗೋಡಿನಲ್ಲಿ ಬಹುಮತದೊಂದಿಗೆ ದಾಕ್ಷಾಯಿಣಿ ಸುರಗಿಮಠ ಆಯ್ಕೆಯಾಗಿದ್ದರು. ಆದರೆ ಹೆಬ್ಬಾರ್ ಬಿಜೆಪಿಗೆ ಬರುತ್ತಿದ್ದಂತೆ ಅವರ ಬೆಂಬಲಿಗರೂ ಬಿಜೆಪಿಗೆ ಬಂದಿರುವ ಕಾರಣ ಎರಡೂ ಕಡೆ ಕಾಂಗ್ರೆಸ್ ತನ್ನ ಅಧಿಕಾರ ಕಳೆದುಕೊಂಡಂತಾಗಿದೆ.


For All Latest Updates

TAGGED:

ABOUT THE AUTHOR

...view details