ಕಾರವಾರ: ಖೇತು ಗ್ರಸ್ತ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಬಹುತೇಕ ದೇವಾಲಯಗಳನ್ನು ಗ್ರಹಣ ಕಾಲದಲ್ಲಿ ಬಂದ್ ಮಾಡಲಾಗುತ್ತದೆ. ಆದರೆ ಕುಮಟಾದ ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ ಗ್ರಹಣ ಕಾಲದಲ್ಲಿಯೂ ಆತ್ಮಲಿಂಗ ದರ್ಶನಕ್ಕೆ ಹಾಗೂ ಸ್ಪರ್ಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ದೇವಸ್ಥಾನದ ಆಡಳಿತ ಮಂಡಳಿ ಮಂಗಳವಾರ ಗ್ರಹಣದ ಮಧ್ಯ ಕಾಲದಿಂದ ಮುಕ್ತಾಯದವರೆಗೆ ಭಕ್ತರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಪ್ರತಿ ದಿನದಂತೆ ಬೆಳಿಗ್ಗೆ 6:30ರಿಂದ 9:30ರವರೆಗೆ ಭಕ್ತರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಬಳಿಕ ಸಂಜೆ 4 ಗಂಟೆಯಿಂದ ಗ್ರಹಣ ಕಾಲ ಮುಗಿಯುವರೆಗೆ ಸಂಜೆ 6.04ರವರೆಗೆ ಸ್ಪರ್ಶ ದರ್ಶನದ ಅವಕಾಶ ಮಾಡಿಕೊಡಲಾಗಿದೆ.