ಶಿರಸಿ: ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸೋಂಕು ಪತ್ತೆಯಾಗಿದ್ದರೂ ಯಾವುದೇ ರೀತಿಯ ಲಕ್ಷಣಗಳು ಇಲ್ಲ ಹಾಗೂ ಅವರು ಆರೋಗ್ಯವಾಗಿದ್ದಾರೆ ಎಂದು ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಸರ್ಕಾರದ ಕೋವಿಡ್ ಮಾರ್ಗಸೂಚಿ ಪ್ರಕಾರ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಸಭಾಧ್ಯಕ್ಷರ ಸಂಪರ್ಕಕ್ಕೆ ಬಂದವರು ಸ್ವಯಂ ಪ್ರೇರಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.