ಶಿರಸಿ: ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಸಿದ್ದಾಪುರದ ಹೆಮ್ಮನಬೈಲ್ನ ನೆರೆಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿ, ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದರು.
ನೆರೆಪೀಡಿತ ಪ್ರದೇಶಗಳಿಗೆ ಗುಡ್ಡಗಳ ಬೆನ್ನೇರಿ ಬಂದ ಕಾಗೇರಿ: ಹೆಚ್ಚಿನ ಅನುದಾನದ ಭರವಸೆ - ನಿರಾಶ್ರಿತ ಕೇಂದ್ರ
ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಸಿದ್ದಾಪುರದ ಹೆಮ್ಮನಬೈಲ್ನ ನೆರೆಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿ, ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್ ಕಾಗೇರಿ, ನೆರೆಪೀಡಿತ ಪ್ರದೇಶಗಳಲ್ಲಿ ತಕ್ಷಣಕ್ಕೆ ಆಗಬೇಕಿರುವ ಕೆಲಸಗಳ ಬಗ್ಗೆ ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರಿಸ್ಥಿತಿಯ ಅವಲೋಕನ ನಡೆಸಿ, ಆಗಬೇಕಿರುವ ಕೆಲಸಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಇಲ್ಲಿಯ ತನಕ ಆಗಿರುವ ಹಾನಿಯ ಬಗ್ಗೆ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಇನ್ನು ಉತ್ತರ ಕನ್ನಡ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ. ಉತ್ತರ ಕರ್ನಾಟಕದಂತೆ ಉತ್ತರ ಕನ್ನಡಕ್ಕೂ ಆದ್ಯತೆ ನೀಡಲಾಗುವುದು. ಈಗಾಗಲೇ ಜಿಲ್ಲೆಗೆ 10 ಕೋಟಿ ರೂಪಾಯಿಗಳ ಅನುದಾನವನ್ನು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಜಿಲ್ಲೆಗೆ ನೀಡಲಾಗುವುದು ಎಂದು ಭರವಸೆ ನೀಡಿದರು.