ಕರ್ನಾಟಕ

karnataka

ETV Bharat / state

ಸರ್ಕಾರಿ ಶಾಲೆ ವಿದ್ಯಾರ್ಥಿನಿ ಎಸ್​ಎಸ್​ಎಲ್​ಸಿ ಟಾಪರ್: 'ಈಟಿವಿ ಭಾರತ'ದೊಂದಿಗೆ ಸಂತಸ ಹಂಚಿಕೊಂಡ ಸನ್ನಿಧಿ - ಎಸ್ಎಸ್ಎಲ್​​ಸಿಯಲ್ಲಿ ಶಿರಸಿಯ ಸನ್ನಿಧಿ ರಾಜ್ಯಕ್ಕೆ ಪ್ರಥಮ

ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ ಸೇರಿ 6 ವಿದ್ಯಾರ್ಥಿಗಳು ಈ ಬಾರಿಯ ಎಸ್ಎಸ್ಎಲ್​​ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. 'ಈಟಿವಿ ಭಾರತ'ದೊಂದಿಗೆ ಸನ್ನಿಧಿ ಮಾತನಾಡಿದ್ದು, ಫಲಿತಾಂಶ ಕುರಿತು ಸಂತಸ ಹಂಚಿಕೊಂಡಿದ್ದಾಳೆ.

SSLC result 2020
'ಈಟಿವಿ ಭಾರತ'ದೊಂದಿಗೆ ಸಂತಸ ಹಂಚಿಕೊಂಡ ವಿದ್ಯಾರ್ಥಿನಿ

By

Published : Aug 10, 2020, 3:51 PM IST

Updated : Aug 10, 2020, 6:05 PM IST

ಶಿರಸಿ(ಉತ್ತರ ಕನ್ನಡ): ಕೊರೊನಾ ಸಂಕಷ್ಟದಲ್ಲೂ ಪರೀಕ್ಷೆ ಬರೆದಿದ್ದ ಎಸ್​​​​ಎಸ್​ಎಲ್​​ಸಿ ವಿದ್ಯಾರ್ಥಿಗಳ ಫಲಿತಾಂಶ ಹೊರಬಿದ್ದಿದೆ. ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ ಸೇರಿ 6 ವಿದ್ಯಾರ್ಥಿಗಳು ಈ ಬಾರಿಯ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಸನ್ನಿಧಿ ಹೆಗಡೆ 625 ಕ್ಕೆ 625 ಅಂಕ ಗಳಿಸುವ ಮೂಲಕ ಉತ್ತರ ಕನ್ನಡ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. ಶಿರಸಿಯ ಪ್ರಗತಿ ನಗರದ ಮಹಾಬಲೇಶ್ವರ ಹೆಗಡೆ ಹಾಗೂ ವೀಣಾ ಹೆಗಡೆ ದಂಪತಿಯ ಪುತ್ರಿಯಾಗಿರುವ ಸನ್ನಿಧಿ ಮೊದಲ ಸ್ಥಾನ ಪಡೆದಿದ್ದಾಳೆ. ಅವರ ತಂದೆ ಕಾರವಾರದ ಆರೋಗ್ಯ ಇಲಾಖೆಯಲ್ಲಿ ಹಿರಿಯ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

'ಈಟಿವಿ ಭಾರತ'ದೊಂದಿಗೆ ಮಾತನಾಡಿದ ವಿದ್ಯಾರ್ಥಿನಿ ಸನ್ನಿಧಿ

ಈಕೆ ಕಳೆದ ಹಲವು ವರ್ಷಗಳಿಂದ ಉತ್ತಮ ಸಾಧನೆ ಮಾಡಿಕೊಂಡು ಬಂದಿರುವ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದು, ಈಕೆಯ ಸಾಧನೆಗೆ ಶಿಕ್ಷಕ ವೃಂದ ಹಾಗೂ ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.

'ಈಟಿವಿ ಭಾರತ'ದೊಂದಿಗೆ ಸಂತಸ ಹಂಚಿಕೊಂಡಿರುವ ಟಾಪರ್​ ಸನ್ನಿಧಿ, ಪೋಷಕರು ಹಾಗೂ ಶಿಕ್ಷಕರು ಮಾರ್ಗದರ್ಶನ ಮಾಡಿದ್ದರಿಂದ ಈ ಸಾಧನೆ ಸಾಧ್ಯವಾಯಿತು ಎಂದಿದ್ದಾರೆ.

Last Updated : Aug 10, 2020, 6:05 PM IST

ABOUT THE AUTHOR

...view details