ಕಾರವಾರ: ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಉತ್ತರ ಕನ್ನಡ ಜಿಲ್ಲಾಡಳಿತ ಗೋವಾ ಗಡಿಯಲ್ಲಿ ಕಠಿಣ ಕ್ರಮಕ್ಕೆ ಮುಂದಾಗಿದೆ. ಕಾರವಾರ ತಾಲೂಕಿನ ಕರ್ನಾಟಕ - ಗೋವಾ ಗಡಿಯ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಜಿಲ್ಲಾಡಳಿತ ಹದ್ದಿನ ಕಣ್ಣಿರಿಸಿದೆ. ನೆರೆಯ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಜಿಲ್ಲೆಗೆ ಪ್ರವೇಶಿಸುವವರ ಮೇಲೆ ನಿಗಾ ಇರಿಸಲಾಗಿದೆ.
ಹೊರ ರಾಜ್ಯದಿಂದ ಆಗಮಿಸುವ ಪ್ರತಿಯೊಬ್ಬರಿಗೂ ಕ್ವಾರಂಟೈನ್ ಸೀಲ್‌ಗಳನ್ನ ಹಾಕಲಾಗುತ್ತಿದೆ. 72 ಗಂಟೆಗಳ ಅವಧಿಯಲ್ಲಿ ಅವರ ಸ್ವ್ಯಾಬ್‌ಗಳನ್ನ ಪಡೆದು ಕೋವಿಡ್ ಪರೀಕ್ಷೆ ಸಹ ಮಾಡಲಾಗುತ್ತಿದೆ. ಅಲ್ಲದೇ ಅಗತ್ಯ ಇರುವೆಡೆ ಕನಿಷ್ಠ ಒಂದು ಐಸೋಲೇಷನ್ ಸೆಂಟರ್‌ನ್ನು ತೆರೆಯಲು ಸೂಚನೆ ನೀಡಲಾಗಿದೆ.