ಶಿರಸಿ :ಪರೀಕ್ಷೆ ಭಯದಿಂದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲ್ಲಾಪುರ ತಾಲೂಕಿನ ಬರಗದ್ದೆ ಸಮೀಪದ ಚಿಟ್ಟಾಮಕ್ಕಿಯಲ್ಲಿ ನಡೆದಿದೆ.
ಪರೀಕ್ಷೆ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು! - Student committed suicide in Uttara Kannada,
ಪರೀಕ್ಷೆ ಭಯದಿಂದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಪರೀಕ್ಷೆ ಭಯದಿಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಶ್ರೀನಿವಾಸ ಭಟ್ಟ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಯಲ್ಲಾಪುರದಲ್ಲಿ ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಈತ ಮುಂಬರುವ ಪರೀಕ್ಷೆಗೆ ಸರಿಯಾಗಿ ಓದಿಕೊಳ್ಳದ ಕಾರಣ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.