ಕರ್ನಾಟಕ

karnataka

ETV Bharat / state

ಶಾಲೆಗೆ ತೆರಳಿದ್ದ ವೇಳೆ ವಿದ್ಯಾರ್ಥಿನಿ ನಾಪತ್ತೆ: ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆ - Student kidnap in Yellapur news'

ಸಂಜೆಯಾದರೂ ಮಗಳು ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಪಾಲಕರು ಯಾರೋ ಅಪಹರಿಸಿರಬಹುದೆಂದು ಯಲ್ಲಾಪುರ ಠಾಣೆಯಲ್ಲಿ ದೂರು ನೀಡಿದ್ದರು. ಸಂಜೆಯಿಂದ ರಾತ್ರಿಯವರೆಗೂ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಆದರೆ, ಮಧ್ಯರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ‌.

Student kidnap in Yellapur
ಶಾಲೆಗೆ ತೆರಳಿದ್ದ ವೇಳೆ ವಿದ್ಯಾರ್ಥಿನಿ ನಾಪತ್ತೆ

By

Published : Feb 26, 2021, 12:47 PM IST

ಕಾರವಾರ: ಶಾಲೆಗೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಮನೆಯಿಂದ ಸ್ವಲ್ಪ ದೂರದಲ್ಲಿರುವ ಕಾಡಿನಲ್ಲಿ ತಡರಾತ್ರಿ ಪತ್ತೆಯಾಗಿದ್ದಾಳೆ. ಈಕೆಯ ಕೈ- ಕಾಲು ಕಟ್ಟಿ ಕಾಡಿಗೆ ಬಿಟ್ಟುಹೋಗಲಾಗಿದೆ. ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ಶಾಲೆಗೆ ತೆರಳಿದ್ದ ವೇಳೆ ವಿದ್ಯಾರ್ಥಿನಿ ನಾಪತ್ತೆ

ಯಲ್ಲಾಪುರದ ಖಾಸಗಿ ಶಾಲೆಯೊಂದರಲ್ಲಿ 10 ನೇ ತರಗತಿ ಓದುತ್ತಿರುವ ನಂದೊಳ್ಳಿಯ ವಿದ್ಯಾರ್ಥಿನಿ ಬುಧವಾರ ಸಂಜೆ ಶಾಲೆಯಿಂದ ಮಾಗೋಡ ಬಸ್‌ನಲ್ಲಿ ಮನೆಗೆ ಹೊರಟಿದ್ದಳು. ಈ ವೇಳೆ ನಂದೊಳ್ಳಿ ಬಂದ ಬಳಿಕ ಬಸ್​ನಿಂದ ಇಳಿದಿದ್ದಳಂತೆ.

ಬೆಳಗ್ಗೆ ಶಾಲೆಗೆ ಹೋದ ಮಗಳು ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕಗೊಂಡ ಪಾಲಕರು ಯಾರೋ ಅಪಹರಿಸಿರಬಹುದೆಂದು ಯಲ್ಲಾಪುರ ಠಾಣೆಯಲ್ಲಿ ದೂರು ನೀಡಿದ್ದರು. ಸಂಜೆಯಿಂದ ರಾತ್ರಿಯವರೆಗೂ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಆದರೆ, ಮಧ್ಯರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ‌.

ಸದ್ಯ ಬಾಲಕಿ ಸುರಕ್ಷಿತವಾಗಿದ್ದಾಳೆ. ಬೈಕ್ ಮೇಲೆ ಬಂದ ಮೂವರು ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿ ಅಪಹರಿಸಿದ್ದರು ಎನ್ನಲಾಗಿದೆ. ರಾತ್ರಿ ವೇಳೆ ಕೈ - ಕಾಲು ಕಟ್ಟಿ ಮನೆಯ ಬಳಿಯ ಕಾಡಿನಲ್ಲಿ ಬಿಟ್ಟು ಹೋಗಿರುವುದಾಗಿ ಬಾಲಕಿ ಹೇಳಿದ್ದಾಳೆ. ಆದರೆ, ಅವರು ಯಾರೆಂಬುದು ಇನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ:25 ವರ್ಷದಿಂದ ನಾಪತ್ತೆಯಾದ ವ್ಯಕ್ತಿ ವಾಪಸ್ ಬಂದಾಗ.. ಮರಳಿ ಗೂಡಿಗೆ ಸೇರಿಸಿದ ಗದಗನ ಯೋಧರು..

ಈ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ವಿದ್ಯಾರ್ಥಿನಿ ಪತ್ತೆಯಾದ ಸ್ಥಳಕ್ಕೆ ಡಿವೈಎಸ್‌ಪಿ ರವಿ ನಾಯ್ಕ, ಪಿಐ ಸುರೇಶ ಯಳ್ಳೂರ ಹಾಗೂ ಪಿಎಸ್‌ಐ ಮಂಜುನಾಥ ಗೌಡರ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬುಧವಾರ ಸಂಜೆ ವೇಳೆ ಬೈಕ್ ಮೇಲೆ ವಿದ್ಯಾರ್ಥಿನಿಯನ್ನು ಅಪರಿಚಿತರು ಮಾಗೋಡ ಕಡೆ ಕರೆದೊಯ್ಯುವುದನ್ನು ನೋಡಿರುವುದಾಗಿ ಕೆಲ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಪೊಲೀಸರು ವಿದ್ಯಾರ್ಥಿನಿ ಮನೆಗೂ ಭೇಟಿ ನೀಡಿ ಕುಟುಂಬದವರೊಂದಿಗೆ ಚರ್ಚೆ ನಡೆಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ABOUT THE AUTHOR

...view details