ಉಡುಪಿ: ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಭೀರ ತನಿಖೆಯಾಗಬೇಕು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ದೇಶದ ಸುರಕ್ಷತೆಯ ದೃಷ್ಟಿಯಿಂದ ಸೇನಾ ಹೆಲಿಕಾಪ್ಟರ್ ಪತನವಾಗಿರುವುದು ಗಂಭೀರವಾದ ವಿಷಯವಾಗಿದೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ರೀತಿಯ ತನಿಖೆಯಾಗಬೇಕು.