ಭಟ್ಕಳ: ಭಟ್ಕಳ ಸರ್ಕಾರಿ ಆಸ್ಪತ್ರೆ, ಪುರಸಭೆ ಹಾಗೂ ನಗರ ಪೊಲೀಸ್ ಜಂಟಿಯಾಗಿ ನಗರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣ ಇಳಿಕೆ ಮಾಡುವ ಉದ್ದೇಶದಿಂದ ಸ್ವ್ಯಾಬ್ ಪರೀಕ್ಷೆ ಪುನಾರಂಭಗೊಳಿಸಿದೆ. ಪುರಸಭೆ ಕಟ್ಟಡದ ಎದುರಿನಲ್ಲಿ ಸಾರ್ವಜನಿಕರಿಗೆ ಸ್ವ್ಯಾಬ್ ಪರೀಕ್ಷೆ ನಡೆಸಲಾಗುತ್ತಿದೆ.
ತಾಲೂಕಿನಲ್ಲಿ ಕೋವಿಡ್ ಪ್ರಕರಣ ಇಳಿಕೆಯಾಗುತ್ತಿವೆ. ಇದನ್ನ ದೃಢಪಡಿಸುವುದಕ್ಕಾಗಿ ಕೋವಿಡ್ ಸ್ವ್ಯಾಬ್ ಪರೀಕ್ಷೆ ನಡೆಸಬೇಕೆಂದುಈ ಹಿಂದೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಜಿಪಂ ಸಿಇಒ ಪ್ರಿಯಾಂಗ ಎಂ ಅವರು ಈ ಬಗ್ಗೆ ಮತ್ತೆ ತಾಲೂಕು ಆರೋಗ್ಯಾಧಿಕಾರಿ ಹಾಗೂ ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಈ ಹಿನ್ನೆಲೆ ಭಟ್ಕಳದಲ್ಲಿ ಸಾರ್ವಜನಿಕವಾಗಿ ಕೋವಿಡ್ ಸ್ವ್ಯಾಬ್ ಪರೀಕ್ಷೆ ನಡೆಸಲಾಗಿದೆ. ಸತತ ಒಂದು ವಾರದ ಜಂಟಿ ಕಾರ್ಯಕ್ರಮ ನಡೆಸಲಾಗುವುದು. ಪುರಸಭೆಯ ಕಚೇರಿಯ ಹೊರ ಭಾಗದಲ್ಲಿ ಬೆಳಗ್ಗೆ 10 ಗಂಟೆಯಿಂದ ಆರಂಭಗೊಂಡ ಜಂಟಿ ಕಾರ್ಯಾಚರಣೆ ಮಧ್ಯಾಹ್ನ 12 ಗಂಟೆ ತನಕ ನಡೆಸಲಾಗಿದೆ. ಇದರಲ್ಲಿ ಕೆಲವರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಪರೀಕ್ಷೆಗೊಳಪಟ್ಟಿದ್ದಾರೆ.